ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ವ್ಯಕ್ತಿ ಸಾವು

Published 6 ಆಗಸ್ಟ್ 2023, 5:41 IST
Last Updated 6 ಆಗಸ್ಟ್ 2023, 5:41 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕಿನ ಬೂದಗುಂಪಾ ಗ್ರಾಮದ ಸಮೀಪದ ಹೊಲದಲ್ಲಿ ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಓಡುವ ವೇಳೆ ಆಯ ತಪ್ಪಿ ಬಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ರೈತ ಹನುಮಂತ ಕಡಿಗೆಟ್ಟಿ (50) ಮೃತಪಟ್ಟವರು.

ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.

ಇರಕಲ್ಲಗಡ ಹೋಬಳಿ ವ್ಯಾಪ್ತಿಯಲ್ಲಿ ಕರಡಿ ಹಾವಳಿ ವ್ಯಾಪಕವಾಗಿದೆ. ಇದೇ ಹೋಬಳಿ ಭಾಗದಲ್ಲಿ ಮೂರು ದಿನಗಳ ಹಿಂದೆ ರಾತ್ರಿ ವೇಳೆ ಹೊಲಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ ಮಾಡಿತ್ತು. ಇದೇ ರೀತಿಯ ಘಟನೆಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT