ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಜನಾದ್ರಿ ಬೆಟ್ಟ ಇಳಿಯುವಾಗ ಹೃದಯಘಾತದಿಂದ ಭಕ್ತ ಸಾವು

Published 10 ಸೆಪ್ಟೆಂಬರ್ 2023, 15:43 IST
Last Updated 10 ಸೆಪ್ಟೆಂಬರ್ 2023, 15:43 IST
ಅಕ್ಷರ ಗಾತ್ರ

ಗಂಗಾವತಿ: ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟ ಹತ್ತಿ ಆಂಜನೇಯನ ದರ್ಶನ ಪಡೆದು ಕೆಳಗಿಳಿಯುತ್ತಿರುವಾಗ ಭಕ್ತರೊಬ್ಬರಿಗೆ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಕಲಘಟಗಿಯ ಕೊಟ್ರೇಶ (40) ಮೃತರು.

ಕೊಟ್ರೇಶ ಅವರು ಕಲಘಟಗಿಯಿಂದ ಕುಟುಂಬ ಸಮೇತ ಅಂಜನಾದ್ರಿಯ ಆಂಜನೇಯನ ದರ್ಶನಕ್ಕೆ ಬಂದಿದ್ದರು. ಬೆಟ್ಟ ಇಳಿಯುತ್ತಿರುವಾಗ ಹೃದಯಾಘಾತ ಸಂಭವಿಸಿದೆ. ಚಿಕಿತ್ಸೆಗಾಗಿ ಆನೆಗೊಂದಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT