ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು: 20 ವರ್ಷವಾದರೂ ಹಕ್ಕುಪತ್ರವಿಲ್ಲ!

Published 20 ಜೂನ್ 2024, 15:58 IST
Last Updated 20 ಜೂನ್ 2024, 15:58 IST
ಅಕ್ಷರ ಗಾತ್ರ

ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ 350ಕ್ಕೂ ಹೆಚ್ಚು ಕುಟುಂಬಗಳಿಗೆ 20 ವರ್ಷಗಳಾದರೂ ಕೂಡ ಹಕ್ಕುಪತ್ರ ವಿತರಣೆಯಾಗದ ಹಿನ್ನಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಸಿಇಒ ರಾಹುಲ್ ರತ್ನಂ ಪಾಂಡೇಯ ಆಗಮಿಸಿ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿ, ‘ಗ್ರಾಮದಲ್ಲಿ ಬಹಳ ವರ್ಷಗಳಿಂದ ಹಕ್ಕುಪತ್ರ ಸಮಸ್ಯೆ ಇರುವುದು ನನ್ನ ಗಮನಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಅಲ್ಲಿಯ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ವ್ಯವಸ್ಥೆ ಮಾಡುತ್ತೇವೆ. ಈಗಾಗಲೇ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಶಾಸಕರು ಮತ್ತು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸಿ ಹಕ್ಕು ಪತ್ರ ನೀಡಲಾಗುವುದು’ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಬಿರಾದಾರ್, ಪಿಡಿಒ ನೀಲಂ ಚಳಗೇರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮುತ್ತಣ್ಣ ಸಕ್ರಪ್ಪ ಚಿನ್ನೂರು, ರವಿ ನಿಂಗಪ್ಪ ಆಗೋಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT