ಸೋಮವಾರ, ಡಿಸೆಂಬರ್ 9, 2019
21 °C

ಮಾರುತೇಶ್ವರ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರಟಗಿ: ತಾಲ್ಲೂಕಿನ ಈಳಿಗನೂರು ಗ್ರಾಮದಲ್ಲಿ ಮಾರುತೇಶ್ವರ ರಥೋತ್ಸವ ಸೋಮವಾರ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಮಾರುತೇಶ್ವರ ದೇವಸ್ಥಾನದಲ್ಲಿ ಬೆಳಗಿನಿಂದ ಕಾರ್ತೀಕೋತ್ಸವ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ರಥೋತ್ಸವವು ಮಾರುತೇಶ್ವರ ದೇವಸ್ಥಾನದಿಂದ ಬನ್ನಿಕಟ್ಟೆಯವರೆಗೆ ಸಾಗಿ ವಾಪಸ್‌ ದೇವಾಲಯಕ್ಕೆ ತೆರಳಿತು. ನೆರೆದ ಭಕ್ತರು ಉತ್ತತ್ತಿ, ಬಾಳೆಹಣ್ಣು ಎಸೆದು ಜಯಘೋಷ ಹಾಕಿದರು.

ಸುತ್ತಮುತ್ತಲಿನ ಗ್ರಾಮಗಳ ಜನರು ಬೆಳಗಿನಿಂದ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಪ್ರತಿಕ್ರಿಯಿಸಿ (+)