ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಟರಿ ಸಂಸ್ಥೆಯಿಂದಮಾಸ್ಕ್, ಸ್ಯಾನಿಟೈಸರ್‌ ವಿತರಣೆ

Last Updated 26 ಮೇ 2020, 2:15 IST
ಅಕ್ಷರ ಗಾತ್ರ

ಗಂಗಾವತಿ: ನಗರದ ಬೀದಿ ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ ಸೋಮವಾರ ರೋಟರಿ ಸಂಸ್ಥೆಯವರು ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ ವಿತರಣೆ ಮಾಡುವ ಮೂಲಕ ಕೊರೊನಾ ವೈರಸ್‌ ಬಗ್ಗೆ ಜಾಗೃತಿ ಮೂಡಿಸಿದರು.

ಈ ವೇಳೆ ಸಂಸ್ಥೆಯ ಅಧ್ಯಕ್ಷ ಡಾ.ಬಸವರಾಜ ಅಯೋಧ್ಯ ಮಾತನಾಡಿ, ರೋಟರಿ ಸಂಸ್ಥೆ ವಿಶ್ವವ್ಯಾಪಿಯಾಗಿ ಸಮಾಜ ಸೇವಾ ಕಾರ್ಯವನ್ನು ಮಾಡಿಕೊಂಡು ಬರುತ್ತಿದೆ. ಆ ನಿಟ್ಟಿನಲ್ಲಿ ನಗರದಲ್ಲಿ ಸುಮಾರು 750 ಮಾಸ್ಕ್‌ ಹಾಗೂ 250 ಸ್ಯಾನಿಟೈಸರ್ ಬಾಟಲ್‌ಗಳನ್ನು ಬೀದಿ ಬದಿಯ ವ್ಯಾಪಾರಸ್ಥರು, ಹಣ್ಣು, ಹೂವು, ತರಕಾರಿ ಮಾರುವವರಿಗೆ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ, ಗೃಹರಕ್ಷಕ ದಳ ಸಿಬ್ಬಂದಿಗೆ ವಿತರಣೆ ಮಾಡಿದ್ದೇವೆ ಎಂದರು.

ಕೊರೊನಾ ವೈರಸ್‌ ತಡೆಗೆ ಪ್ರತಿಯೊಬ್ಬರು ಅಂತರವನ್ನು ಕಾಯ್ದುಕೊಳ್ಳಬೇಕು. ಮುಖಕ್ಕೆ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಅನಗತ್ಯವಾಗಿ ಹೊರಗೆ ಓಡಾಡಬಾರದು ಎಂದರು.

ಈ ವೇಳೆ ರೋಟರಿ ಸಂಸ್ಥೆಯ ಹಿರಿಯ ಸದಸ್ಯರಾದ ಪ್ರಕಾಶ ಚೋಪ್ರಾ, ಉಗಮರಾಜ, ಜನಾದ್ರಿ ದೊಡ್ಡಯ್ಯ, ಡಾ.ವೀರನಗೌಡ ಪಾಟೀಲ, ಸುರೇಶ ಸೋಲಂಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT