ಗುರುವಾರ , ಸೆಪ್ಟೆಂಬರ್ 29, 2022
26 °C

ದಢೇಸಗೂರ ‌ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಎಂ.ಬಿ.ಪಾಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಕನಕಗಿರಿ ಶಾಸಕ ಬಸವರಾಜ ದಢೇಸಗೂರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆಗ್ರಹಿಸಿದರು.

ಸೋಮವಾರ ಆಯೋಜನೆಯಾಗಿದ್ದ ಜಿಲ್ಲೆಯ ಕಾಂಗ್ರೆಸ್ ಹಾಲಿ,‌ ಮಾಜಿ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಅವರು ಇಲ್ಲಿಗೆ ಬಂದಿದ್ದಾರೆ.

ಈ ವೇಳೆ ಮಾತನಾಡಿ, ಹಣವನ್ನು ಸರ್ಕಾರಕ್ಕೆ ಕೊಟ್ಟಿದ್ದೇನೆ ಎನ್ನುವ ಮಾತು ಆಡಿಯೊದಲ್ಲಿದೆ. ಸರ್ಕಾರ ಅಂದರೆ ಯಾರ ಕೈಯಲ್ಲಿ ಹಣ ಕೊಟ್ಟಿದ್ದಾರೆ ಎನ್ನುವುದು ಬಹಿರಂಗವಾಗಬೇಕು. ಶಾಸಕರ ಹೇಳಿಕೆ ಗಮನಿಸಿದರೆ ಪೂರ್ಣ ಸರ್ಕಾರವೇ ಹಗರಣದಲ್ಲಿ ಭಾಗಿಯಾದಂತೆ ಕಾಣುತ್ತಿದೆ ಎಂದು ಆರೋಪಿಸಿದರು.

ಹಗರಣ ಬಗ್ಗೆ ಸಂಪೂರ್ಣ ಪಾರದರ್ಶಕ ತನಿಖೆ ನಡೆಯಬೇಕು. ಎನೂ ತಪ್ಪು ಮಾಡದ ಅಭ್ಯರ್ಥಿಗಳು ಇದ್ದು, ಅವರಿಗೆ ನ್ಯಾಯ ಸಿಗಬೇಕು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು