ಕೊಪ್ಪಳ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 12 ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಆರೋಗ್ಯ ಇಲಾಖೆಯ 20 ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಗುತ್ತಿಗೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ಯಮೋಜಿ ನೇತೃತ್ವದಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ಕೈಬಿಟ್ಟು ಕೋವಿಡ್ ಕೆಲಸಕ್ಕೆ ಹಾಜರಾಗುವಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಮನವಿ ಮಾಡಿದ್ದರು.

ಕರ್ತವ್ಯಲೋಪ, ಅನಧಿಕೃತ ಗೈರು, ಅಸಹಕಾರ, ನೇಮಕಾತಿ ನಿಯಮ ಮತ್ತು ಷರತ್ತು ಉಲ್ಲಂಘನೆ ಮಾಡಿದ್ದಾರೆ ಎನ್ನುವ ಕಾರಣಗಳನ್ನು ನೀಡಿ ನೌಕರರನ್ನು ವಜಾಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.