ಗುರುವಾರ , ಸೆಪ್ಟೆಂಬರ್ 16, 2021
24 °C
ಅರ್ಚಕರ ಸಭೆಯಲ್ಲಿ ಸಿಪಿಐ ಎಂ. ನಾಗರಡ್ಡಿ ಸಲಹೆ

ದೇಗುಲ ಭದ್ರತೆಗೆ ಕ್ರಮ ಕೈಗೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ಗಾ: ‘ದೇವಸ್ಥಾನಗಳಲ್ಲಿ ಬಂಗಾರ, ಬೆಳ್ಳಿಯ ಆಭರಣಗಳು ಹಾಗೂ ಬೆಲೆಬಾಳುವ ವಸ್ತುಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ದೇವಸ್ಥಾನಕ್ಕೆ ಸಂಬಂಧಪಟ್ಟ ಅರ್ಚಕರು ಹಾಗೂ ಮುಖ್ಯಸ್ಥರು ಸೂಕ್ತ ಭದ್ರತೆಗಾಗಿ ಅಗತ್ಯ ಕ್ರಮಗಳನ್ನು ಅನುಸರಿಸಬೇಕು’ ಎಂದು ಸಿಪಿಐ ಎಂ. ನಾಗರಡ್ಡಿ ಹೇಳಿದರು.

ಪಟ್ಟಣದ ಪೊಲೀಸ್‍ ಠಾಣೆಯಲ್ಲಿ ಶನಿವಾರ ನಡೆದ ತಾಲ್ಲೂಕಿನ ವಿವಿಧ ದೇವಸ್ಥಾನಗಳ ಮುಖ್ಯಸ್ಥರು ಹಾಗೂ ಅರ್ಚಕರ ಸಭೆಯಲ್ಲಿ ಅವರು ಮಾತನಾಡಿದರು.

‘ದೇವಸ್ಥಾನಗಳಲ್ಲಿ ಭದ್ರತೆಯ ದೃಷ್ಟಿಯಿಂದ ಅವಶ್ಯಕವಿದ್ದರೆ ಗಾರ್ಡ್‌ಗಳನ್ನು ನೇಮಿಸಿಕೊಳ್ಳಬೇಕು. ದೇವಸ್ಥಾನದ ಒಳಗೆ ಮತ್ತು ಹೊರಗೆ ಗುಣಮಟ್ಟದ ಸಿ.ಸಿ. ಕ್ಯಾಮರಾ ಅಳವಡಿಸಬೇಕು. ಭಕ್ತರ ಸೋಗಿನಲ್ಲಿ ಬರುವ ವ್ಯಕ್ತಿಗಳ ಬಗ್ಗೆ ಸಂಶಯ ಕಂಡುಬಂದರೆ ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ದೇವಸ್ಥಾನದ ಮುಖ್ಯ ಬಾಗಿಲಿಗೆ ಉತ್ತಮ ಸೆಂಟರ್‌ಲಾಕ್ ಅಳವಡಿಸಬೇಕು. ಬಾಗಿಲು ಮುಚ್ಚಿದ ಸಂದರ್ಭದಲ್ಲಿ ಅನಧಿಕೃತ ವ್ಯಕ್ತಿಗಳು ಪ್ರವೇಶಿಸಿದರೆ ಅಲರಾಂ ಶಬ್ದ ಮಾಡುವ ವ್ಯವಸ್ಥೆ ಅಳವಡಿಸುವುದು ಸೇರಿದಂತೆ ಇನ್ನಿತರ ಅಗತ್ಯ ಕ್ರಮಕ್ಕೆ ಮುಂದಾಗಬೇಕು’ ಎಂದು ತಿಳಿಸಿದರು.

ಪಿಎಸ್‍ಐ ಶಿವಕುಮಾರ ಮಾತನಾಡಿ, ‘ದೇವಸ್ಥಾನ ಸಣ್ಣದಿರಲಿ, ದೊಡ್ಡದಿರಲಿ ಮುಂಜಾಗ್ರತಾ ಕ್ರಮ ಅನುಸರಿಸುವುದು ಅವಶ್ಯಕ.

ಯಾವುದೇ ಬಂಗಾರ ಅಥವಾ ಬೆಳ್ಳಿಯ ವಿಗ್ರಹಗಳನ್ನು ಇಟ್ಟು ಪೂಜಿಸುವ ಸಂದರ್ಭದಲ್ಲಿ ವಿಶೇಷ ಕಾಳಜಿ ತೋರುವುದು ಮುಖ್ಯ’ ಎಂದರು.

ತಾಲ್ಲೂಕಿನ ವಿವಿಧ ಗ್ರಾಮ ದೇವಸ್ಥಾನಗಳ ಮುಖ್ಯಸ್ಥರು ಹಾಗೂ ಪೂಜಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು