ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಜನಾದ್ರಿ ಬೆಟ್ಟಕ್ಕೆ ಹನುಮ ಮಾಲಾಧಾರಿಗಳು: ಸಚಿವೆ ಜೊಲ್ಲೆ ಸಭೆ

Last Updated 15 ನವೆಂಬರ್ 2022, 16:25 IST
ಅಕ್ಷರ ಗಾತ್ರ

ಕೊಪ್ಪಳ: ಆಂಜನೇಯ ದೇವಾಲಯವಿರುವ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಹನುಮ ಮಾಲಾಧಾರಿಗಳು ಬರಲಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ರಾಜ್ಯ ಮುಜರಾಯಿ, ವಕ್ಫ್ ಹಾಗೂ ಹಜ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಬುಧವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಲಾಧಾರಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕುರಿತಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು. ಮ. 12.30ಕ್ಕೆ ಅಂಜನಾದ್ರಿ ಬೆಟ್ಟದ ಕೆಳಭಾಗದಲ್ಲಿ ವೀಕ್ಷಣೆ ನಡೆಸಿ ಹುಬ್ಬಳ್ಳಿಗೆ ವಾಪಸ್‌ ಹೋಗುವರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT