ಬುಧವಾರ, ಡಿಸೆಂಬರ್ 2, 2020
16 °C
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾರ್ಮಿಕರ ಸಂಘದಿಂದ ಧರಣಿ

ನರೇಗಾ ಕೆಲಸ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಕೂಲಿಕಾರರಿಗೆ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಬುಧವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾರ್ಮಿಕರ ಸಂಘ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದೆ.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಕನಕರಾಯ ಮಾತನಾಡಿ,‘ಕಳೆದ ತಿಂಗಳು ನಾವು ತಾ.ಪಂ ಮುಂದೆ ಕೆಲಸಕ್ಕಾಗಿ ಆಗ್ರಹಿಸಿ ಪ್ರತಿಭಟನೆ ಮಾಡಿದ್ದೆವು. ಈ ವೇಳೆ ತಾ.ಪಂ ಅಧಿಕಾರಿಗಳು ಕೂಡ ಕೆಲಸ ನೀಡುವ ಭರವಸೆ ನೀಡಿದ್ದರು. ಆದರೆ, ಇಲ್ಲಿವರೆಗೂ ಅದು ಈಡೇರಿಲ್ಲ’ ಎಂದು ಹೇಳಿದರು.

ತಾಲ್ಲೂಕಿನ ಚಿಕ್ಕಜಂತಕಲ್‌, ಢಣಾಪುರ, ಹೇರೂರು, ವಡ್ಡರಹಟ್ಟಿ, ಸಣಾಪುರ, ಚಿಕ್ಕಬೆಣಕಲ್‌, ಯರಡೋಣಾ ಸೇರಿ ಹಲವು ಗ್ರಾಮಗಳ ಕೂಲಿಕಾರರೊಂದಿಗೆ ತಾಲ್ಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದೇವೆ. ಉದ್ಯೋಗ ಖಾತ್ರಿ ಕೆಲಸ ನೀಡಬೇಕು. ಇಲ್ಲದಿದ್ದರೇ ಗುಳೆ ಹೋಗಲು ಅನುಮತಿ ಕೊಡಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಕೂಲಿಕಾರರಾದ ಹುಲಗಪ್ಪ, ತಿಮ್ಮಣ್ಣ, ಮುತ್ತಣ್ಣ, ಯಮನೂರ, ಶೇಖಮ್ಮ, ಗಂಗಮ್ಮ, ಬಸವರಾಜ, ಹನುಮೇಶ ಹಾಗೂ ಸೋಮಮ್ಮ ಸೇರಿದಂತೆ ವಿವಿಧ ಗ್ರಾಮದ ಕೂಲಿಕಾರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.