ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕೀಟ್ ಹೌಸ್ ನಿರ್ಮಾಣಕ್ಕೆ ₹3.93 ಕೋಟಿ: ತಂಗಡಗಿ

Published 24 ಆಗಸ್ಟ್ 2024, 14:16 IST
Last Updated 24 ಆಗಸ್ಟ್ 2024, 14:16 IST
ಅಕ್ಷರ ಗಾತ್ರ

ಕನಕಗಿರಿ: ‘ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ‌ ಕೆಲಸ ಮಾಡುತ್ತಿದ್ದಾರೆ’ ಎಂದು‌ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ‌ ಹೇಳಿದರು.

ಪಟ್ಟಣದ‌ ಪ್ರವಾಸಿ ಮಂದಿರದ ಆವರಣದಲ್ಲಿ ಗಣ್ಯ ವ್ಯಕ್ತಿಗಳ ಅತಿಥಿ ಗೃಹ ನಿರ್ಮಾಣಕ್ಕೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಸರ್ಕೀಟ್ ಹೌಸ್‌ಗೆ ₹3.93 ಕೋಟಿ ಹಾಗೂ ನೀರ್ಲೂಟಿ ರಸ್ತೆಯಲ್ಲಿ ಸಾಂಸ್ಕೃತಿಕ ಭವನ‌‌ ನಿರ್ಮಾಣಕ್ಕೆ ₹2.5‌ ಕೋಟಿ ಬಿಡುಗಡೆಯಾಗಿದೆ’ ಎಂದು ತಿಳಿಸಿದರು.

‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಂವಿಧಾನದ ಮೇಲೆ‌ ನಿರಂತರ ದಾಳಿ ಆಗುತ್ತಿದೆ. ಸಂವಿಧಾನ ಉಳಿಸುವ ಕೆಲಸ ಆಗುತ್ತಿಲ್ಲ, ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ’ ಎಂದು ದೂರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.‌ಗಂಗಾಧರಸ್ವಾಮಿ, ವಕ್ತಾರ ಶರಣಬಸಪ್ಪ ಭತ್ತದ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿ.ಪಂ.ಮಾಜಿ ಸದಸ್ಯ ವಿರೇಶ ಸಮಗಂಡಿ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಜಿಲ್ಲಾ ಕೆಡಿಪಿ ಸದಸ್ಯ ನಾಗಪ್ಪ ಹುಗ್ಗಿ, ತಾ.ಪಂ.ಮಾಜಿ ಅಧ್ಯಕ್ಷ ಹೊನ್ನೂರಸಾಬ ಮೇಸ್ತ್ರಿ, ಬಸವಂತಗೌಡ, ಪ್ರಮುಖರಾದ ಸಿದ್ದಪ್ಪ ನಿರಲೂಟಿ, ರವಿ ಪಾಟೀಲ, ಪಟ್ಟಣ ಪಂಚಾಯಿತಿ ಸದಸ್ಯರಾದ ಸಂಗಪ್ಪ ಸಜ್ಜನ್, ಅನಿಲಕುಮಾರ ಬಿಜ್ಜಳ, ಶರಣೇಗೌಡ, ರಾಜಸಾಬ ನಂದಾಪುರ, ರಾಕೇಶ ಕಂಪ್ಲಿ , ಕಂಠಿರಂಗ ನಾಯಕ, ಖಾದರಬಾಷ ಗುಡಿಹಿಂದಲ, ಮದರಸಾಬ ಸಂತ್ರಾಸ್, ಟಿ.‌ಜೆ.‌ರಾಮಚಂದ್ರ,
ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT