ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ಮಹಿಳೆಯರ ಸುರಕ್ಷತೆಗೆ ಆದ್ಯತೆ: ಸಚಿವ ಹಾಲಪ್ಪ

Last Updated 17 ಫೆಬ್ರುವರಿ 2023, 11:32 IST
ಅಕ್ಷರ ಗಾತ್ರ

ಕೊಪ್ಪಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್‌ನಲ್ಲಿ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಇದು ದೂರದೃಷ್ಟಿಯ ಬಜೆಟ್ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಗೃಹಿಣಿಯರಿಗೆ ತಿಂಗಳಿಗೆ ₹500 ಸಹಾಯಧನ, ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಶೀಘ್ರದಲ್ಲೇ ಜಾರಿ, ಆ‍್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಶಾಸನ ₹10,000ಕ್ಕೆ ಏರಿಕೆ, ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌, ಮಹಿಳಾ ಕಾರ್ಮಿಕರಿಗೆ ₹500 ಸಹಾಯಧನ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಎಂದಿದ್ದಾರೆ.

‘ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಹಾಯಧನ ₹1000ದಿಂದ ₹1500 ಏರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ₹5,676 ಕೋಟಿ, ಒಂದು ಲಕ್ಷ ಮಹಿಳೆಯರಿಗೆ ಉಚಿತ ಕೌಶಲ ತರಬೇತಿ, ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ₹100 ಕೋಟಿ, 45 ಸಾವಿರ ಮಹಿಳಾ ಸ್ವಸಹಾಯ ಗುಂಪುಗಳಿಗೆ ₹1,800 ಕೋಟಿ ಸಾಲ ಸೌಲಭ್ಯ ಒದಗಿಸಲಾಗಿದೆ. ಸಮಾಜದ ಸರ್ವ ಸಮುದಾಯಗಳ ಏಳಿಗೆಯನ್ನು ಒಳಗೊಂಡಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ’ ಎಂದು ಹಾಲಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT