ಮಂಗಳವಾರ, ಸೆಪ್ಟೆಂಬರ್ 17, 2019
21 °C

ಕೊಪ್ಪಳ: ಸಚಿವ ಮಾಧುಸ್ವಾಮಿ ಭೇಟಿ

Published:
Updated:

ಕೊಪ್ಪಳ: ತಾಲ್ಲೂಕಿನ ಕೊಳೂರು ಬಾಂದಾರಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ಭೇಟಿ ನೀಡಿ ವೀಕ್ಷಿಸಿದರು. 

ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಡೆಯುವ ಎಲ್ಲ ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಲಾಗುವುದು. ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ನಗರದ ಗವಿಮಠಕ್ಕೆ ಸಚಿವರು ಭೇಟಿ ನೀಡಿ ದರ್ಶನ ಪಡೆದರು.

ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆಯುವ ಅವ್ಯವಹಾರ ಕುರಿತು ಸಮಗ್ರ ಮಾಹಿತಿ ಪಡೆಯಲಾಗುವುದು ಎಂದರು.

ಇಲಾಖೆ ಅಧಿಕಾರಿಗಳು ಸಭೆಗೆ ಗೈರು ಹಾಜರಾಗುವ ಬಗ್ಗೆ ಜಿಲ್ಲಾಧಿಕಾರಿಗಳು ವರದಿ ನೀಡಬೇಕು ಎಂದು ಸೂಚಿಸಿದರು. ಸಂಸದ ಸಂಗಣ್ಣ ಕರಡಿ ಮುಂತಾದವರು ಇದ್ದರು.

Post Comments (+)