ವರದಿ ಜಾರಿಗೆ ವಿರೋಧ: ಸಚಿವರ ಕಾರಿಗೆ ಮುತ್ತಿಗೆ

ಕೊಪ್ಪಳ: ‘ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧವಿದೆ’ ಎಂದು ಹೇಳಿಕೆ ನೀಡಿದ್ದ ಪಶುಸಂಗೋಪನಾ ಸಚಿವ ಪ್ರಭು ಚವಾಣ್ ಅವರ ಕಾರಿಗೆ ಮಾದಿಗ ಮಹಾಸಭಾದ ಮುಖಂಡರು ಮುತ್ತಿಗೆ ಹಾಕಲು ಬಂದಿದ್ದರಿಂದ ಅವರನ್ನು ಪೊಲೀಸರು ಬಂಧಿಸಿ ವಾಹನದಲ್ಲಿ ಕರೆದುಕೊಂಡು ಹೋದರು.
ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಬಂದಾಗ ಮಾದಿಗ ಸಮಾಜದ ಮುಖಂಡರು ಸಚಿವರ ವಿರುದ್ಧ ಘೋಷಣೆ ಕೂಗಿ, ಕಾರಿನತ್ತ ಬಂದರು. ಅವರನ್ನು ಪೊಲೀಸರು ತಡೆದು ಬಂಧಿಸಿ ಮುನಿರಾಬಾದ್‌ಗೆ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರು.
ಮಾದಿಗ ಮಹಾಸಭಾದ ಮುಖಂಡ ಮಲ್ಲಿಕಾರ್ಜುನ ಪೂಜಾರ, ‘ಸಚಿವ ಚವಾಣ್ ಅವರು ಹೇಳಿಕೆ ಹಿಂದಕ್ಕೆ ಪಡೆದು, ವರದಿ ಜಾರಿಗೆ ಸಹಕರಿಸಬೇಕು. ಇಲ್ಲದಿದ್ದರೆ ಅವರು ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಲ್ಲಿ ಕಪ್ಪುಬಟ್ಟೆ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ಈ ಮಾತನ್ನು ನಾನು ಹಿಂದಿನಿಂದಲೂ ಹೇಳುತ್ತ ಬಂದಿದ್ದೇನೆ. ಇದು ನನ್ನ ವೈಯಕ್ತಿಕ ಮತ್ತು ಸಮಾಜದ ಅಭಿಪ್ರಾಯ. ವರದಿ ಜಾರಿಗೆ ಬಿಡುವುದಿಲ್ಲ’ ಎಂದರು.
ತಮ್ಮ ಹಿಂಬಾಲಕರಿಂದ ಶೂ ತರಿಸಿ ಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ಇದು ದೊಡ್ಡ ವಿಷಯವಲ್ಲ. ಶೂ ತರು ವಂತೆ ಹೇಳಿದ್ದೇನೆಯೇ ಹೊರತು ಕೈಯಲ್ಲಿ ಹಿಡಿದುಕೊಂಡು ಬರುವಂತೆ ಹೇಳಿಲ್ಲ’ ಎಂದು ಸಮಜಾಯಿಷಿ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.