ಶುಕ್ರವಾರ, ಅಕ್ಟೋಬರ್ 7, 2022
28 °C

ಅಂಜನಾದ್ರಿ ಬೆಟ್ಟವೇರಿದ ಸಚಿವೆ ಜೊಲ್ಲೆ: ಅನ್ನದಾಸೋಹಕ್ಕೆ ಮರುಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ (ಕೊಪ್ಪಳ): ‘ಹನುಮನ ಜನ್ಮಸ್ಥಳ ಅಂಜನಾದ್ರಿಯನ್ನು ದೇಶದ ಗಮನ ಸೆಳೆಯುವಂತೆ ಅಭಿವೃದ್ದಿ ಪಡಿಸಲಾಗುವುದು’ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸೋಮವಾರ ಅಂಜನಾದ್ರಿ ಬೆಟ್ಟ ಏರಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ‘ಕೋವಿಡ್‌ ಕಾರಣದಿಂದ ಸ್ಥಗಿತಗೊಂಡಿದ್ದ ಅನ್ನದಾಸೋಹಕ್ಕೆ ಮರುಚಾಲನೆ ನೀಡಲಾಗಿದೆ. ಅಂಜನಾದ್ರಿ ಬೆಟ್ಟ ‍ಶ್ರೀರಾಮನ ಭಕ್ತ ಹನುಮಂತನ ಜನ್ಮಸ್ಥಳ. ಈ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಗೊಂದಲವಿಲ್ಲ. ಇದನ್ನು ಸಾಬೀತುಪಡಿಸಲು ಬೇಕಾದ ಎಲ್ಲಾ ದಾಖಲೆಗಳು ನಮ್ಮ ಮುಂದೆ ಇವೆ‘ ಎಂದರು.

‘ಈ ಕ್ಷೇತ್ರದ ಅಭಿವೃದ್ಧಿಗೆ ದೇಶದ ಗಮನ ಸೆಳೆಯುವ ರೀತಿಯ ನೀಲನಕ್ಷೆ ತಯಾರಾಗಿದೆ. ಬರುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು