ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರು ಶಾಸಕರ ಕೆಲಸಕ್ಕೆ ಆದ್ಯತೆ ನೀಡಲಿ: ಸಚಿವ ಶಿವರಾಜ ತಂಗಡಗಿ

Published 25 ಜುಲೈ 2023, 14:11 IST
Last Updated 25 ಜುಲೈ 2023, 14:11 IST
ಅಕ್ಷರ ಗಾತ್ರ

ಕಾರಟಗಿ (ಕೊಪ್ಪಳ ಜಿಲ್ಲೆ): ‘ಕಾಂಗ್ರೆಸ್‌ನ ಕೆಲ ಹಿರಿಯ ಶಾಸಕರು ಸಚಿವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ ಕುರಿತು ಮಾಹಿತಿ ಇಲ್ಲ. ಸಚಿವರು ಶಾಸಕರ ಕೆಲಸಗಳನ್ನು ಆದ್ಯತೆಯ ಮೇರೆಗೆ ಮಾಡಬೇಕು’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಇಲಾಖೆಗೆ ಸಂಬಂಧಿಸಿದ ಶಾಸಕರ ಕೆಲಸಗಳನ್ನು ಅವರಿಗೆ ತೃಪ್ತಿಯಾಗುವಂತೆ ಮಾಡಿದ್ದೇನೆ. ಮುಂದೆಯೂ ಮಾಡುವೆ. ಇದರ ಜತೆಗೆ ಸಿ.ಎಂ ಸೂಚಿಸಿದ ಕೆಲಸವನ್ನೂ ಮಾಡುತ್ತಿದ್ದೇನೆ’ ಎಂದು ಹೇಳಿದರು.

ಆಪರೇಷನ್ ಸಿಂಗಾಪುರದ ಕುರಿತು ಕೇಳಿದ ಪ್ರಶ್ನೆಗೆ, ‘ರಾಜ್ಯದ ಜನರು ಕಾಂಗ್ರೆಸ್‌ಗೆ ಬಹುಮತ ನೀಡಿದ್ದಾರೆ. ಆಪರೇಷನ್‌ ಭೀತಿ ಇಲ್ಲ. ಅಂಥ ಸ್ಥಿತಿ ಬರುವುದಿಲ್ಲ. ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಇನ್ನೂ ಮೂರು ಅವಧಿಯವರೆಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳುವುದು ಖಚಿತ’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT