ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಹಾಲವರ್ತಿಗೆ ತಂಗಡಗಿ ಭೇಟಿ; ಶಾಂತಿ ಕಾಪಾಡಲು ಮನವಿ

Published 19 ಫೆಬ್ರುವರಿ 2024, 4:27 IST
Last Updated 19 ಫೆಬ್ರುವರಿ 2024, 4:27 IST
ಅಕ್ಷರ ಗಾತ್ರ

ಕೊಪ್ಪಳ: ‘ಅಸ್ಪೃಶ್ಯತೆ ಆಚರಣೆ ಯಾವುದೇ ಕಾರಣಕ್ಕೂ ನಡೆಯಬಾರದು. ಸಮಾಜ ಒಪ್ಪದ ಕೆಲಸವನ್ನು ಯಾರೂ ಮಾಡಬಾರದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮನವಿ ಮಾಡಿದರು.

ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ಇತ್ತೀಚೆಗೆ ದಲಿತರಿಗೆ ಹೋಟೆಲ್‌ಗಳಲ್ಲಿ ಪ್ರವೇಶ ನೀಡುತ್ತಿಲ್ಲ. ಕ್ಷೌರ ಮಾಡದೆ ತಾರತಮ್ಯ ಮಾಡಲಾಗುತ್ತಿದೆ ಎಂದು ಘಟನೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ತಂಗಡಗಿ ಎಲ್ಲರೊಂದಿಗೂ ಮಾತನಾಡಿ ಶಾಂತಿ ಹಾಗೂ ಸಹಭಾಳ್ವೆಯಿಂದ ಬದುಕಬೇಕು ಎಂದು ಹೇಳಿದರು. ಸಂತ್ರಸ್ತ ಯುವಕನಿಗೆ ₹25 ಸಾವಿರ ಚೆಕ್‌ ವಿತರಿಸಿದರು.  

‘ಯಾರೂ ತಾರತಮ್ಯ ಮಾಡಬಾರದು. ಅಮಾಯಕರ ಮೇಲೆ ದಾಳಿ ಮಾಡಿದರೆ ಅಂತಹದ್ದನ್ನು ಸಹಿಸಲಾಗದು. ಆದಾಗ್ಯೂ ಮತ್ತೆ ತಪ್ಪುಗಳು ನಡೆದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು. ಜನರನ್ನು ಒಡೆದಾಳುವ ಅಮಾನವೀಯ ತಂತ್ರಗಳಿಗೆ ಯಾರೂ ಬಲಿಪಶುಗಳಾಗಬಾರದು. ತಾರತಮ್ಯ ಮಾಡುವುದಕ್ಕೆ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ’ ಎಂದು ಹೇಳಿದರು.

ಅವಮಾನದ ಸಂಗತಿ: ಮುಖಂಡ ಡಿ.ಎಚ್.ಪೂಜಾರ ಮಾತನಾಡಿ ‘ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಡೆದಿರುವುದು ಈ ದೇಶಕ್ಕೆ ಅವಮಾನದ ಸಂಗತಿಯಾಗಿದೆ. ದೂರು ಕೊಟ್ಟಿದ್ದಕ್ಕೆ ಮೇಲ್ಜಾತಿಯ ಜನರು ನಮಗೆ ಟಾರ್ಗೆಟ್ ಮಾಡಿದ್ದಾರೆ. ಹೊಲಗಳಿಗೆ ಹೋದಾಗ ಕಲ್ಲಿನಿಂದ ಹೊಡೆಯುತ್ತಿದ್ದಾರೆ ಎಂದು ನೊಂದವರು ಅಳಲು ತೋಡಿಕೊಳ್ಳುತ್ತಿದ್ದಾರೆ. ಅಂಗಡಿಯಲ್ಲಿ ಪ್ರವೇಶ ನೀಡದ, ಕಟಿಂಗ್ ಮಾಡಲು ತಿರಸ್ಕರಿಸುವ ಅಂಗಡಿಕಾರರ ಮೇಲೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಈ ವೇಳೆ ಜಿಲ್ಲೆ ವಿವಿಧ ಅಧಿಕಾರಿಗಳು, ಹೋರಾಟಗಾರರು ಹಾಗೂ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT