ಕೊಪ್ಪಳ: ಜಿಲ್ಲೆಯ ಯಲಬುರ್ಗಾ ಪಟ್ಟಣದ ನಿವಾಸಿ ಮಹೇಶ ಖಂಡ್ರಿ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದು ಇಲ್ಲಿನ ಫೋಕ್ಸೊ ನ್ಯಾಯಾಲಯವು ಆತನಿಗೆ 20 ವರ್ಷ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ.

2023ರ ಸೆಪ್ಟೆಂಬರ್ನಲ್ಲಿ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ ಮಹೇಶ ಅನೇಕ ಬಾರಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದ. ಯಾರಿಗೂ ಹೇಳದಂತೆ ತಾಕೀತು ಮಾಡಿದ್ದ. ಬಾಲಕಿಯೊಂದಿಗೆ ಮಹೇಶ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ನಂತರ ಓಡಿ ಹೋಗಿದ್ದ.

ನಂತರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿತ್ತು. ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈಗಿನ ಸಿಪಿಐ ಮೌನೇಶ್ವರ ಮಾಲಿಪಾಟೀಲ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದರು. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.