ಕೊಪ್ಪಳ: ಸರ್ಕಾರಿ ಹಣ ದುರುಪಯೋಗ ಪ್ರಕರಣದಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಭಾಗ್ಯನಗರ ಶಾಖೆಯ ಕಿರಿಯ ಸಹಾಯಕ ಅಧಿಕಾರಿ ಜಿ.ಮಂಜುನಾಥ ಅವರಿಗೆ ಇಲ್ಲಿನ ಸಿಜೆಎಂ ನ್ಯಾಯಾಲಯ ಏಳು ವರ್ಷ ಸಾಧಾರಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.

ಹಾಸನ ಜಿಲ್ಲೆಯ ಗೋರೂರಿನ ಮಂಜುನಾಥ 2002–03ನೇ ಸಾಲಿನಲ್ಲಿ ಇಲ್ಲಿ ಕೆಲಸ ಮಾಡುತ್ತಿದ್ದಾಗ ಮಗ್ಗಕ್ಕೆ ಸಂಬಂಧಿಸಿದ ಪರಿಕರಗಳನ್ನು ಮಾರಾಟ ಮಾಡಿದ್ದ ₹2.12 ಲಕ್ಷವನ್ನು ಸ್ವಂತಕ್ಕೆ ಬಳಸಿದ್ದರು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ 2005ರಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖಾಧಿಕಾರಿ, ಇನ್ಸ್ಟೆಕ್ಟರ್ ಶಿವಲಿಂಗರಾಧ್ಯ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆಎಂ ಕೋರ್ಟ್ನ ಮುಖ್ಯ ನ್ಯಾಯಾಧೀಶ ಮಲ್ಕಾರಿ ರಾಮಪ್ಪ ಒಡೆಯರ್ ಆದೇಶಿಸಿದರು. ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ವಸಂತ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.