ಶುಕ್ರವಾರ, ಮೇ 27, 2022
22 °C

ಶಾಸಕ ಗೈರು: ಜನರ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಗಿರಿ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಬುಧವಾರ ನಡೆದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಶಾಸಕ ಬಸವರಾಜ ದಢೇಸೂಗೂರು ಅವರು ಗೈರಾಗಿದ್ದರು.

ಕನಕಗಿರಿ ನೂತನ ತಾಲ್ಲೂಕು ಕೇಂದ್ರವಾಗಿ ನಾಲ್ಕು ವರ್ಷಗಳು ಗತಿಸಿದ್ದು, ಶಾಸಕರು ಒಂದೆರಡು ಸಲ ಮಾತ್ರ ಇಲ್ಲಿನ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಬಹುತೇಕ ನೀರಾವರಿ ಪ್ರದೇಶವಾಗಿರುವ ಕಾರಟಗಿ ತಾಲ್ಲೂಕಿಗೆ ಸೀಮಿತಗೊಂಡಿದ್ದಾರೆ ಎಂದು ಸ್ಥಳೀಯರು ದೂರಿದರು.

ಸತತ ಎರಡು ವರ್ಷಗಳಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಭಾಗವಹಿಸಿಲ್ಲ. ತಾವೇ ಆಡಿದ ಮಾತನ್ನು ಮರೆತ್ತಿದ್ದಾರೆ.

ಪಟ್ಟಣದ 17 ವಾರ್ಡ್‌ಗಳ ಸದಸ್ಯರು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಹ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಗೈರಾಗಿದ್ದು ಚರ್ಚೆಗೆ ಗ್ರಾಸವಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು