ಕೊಪ್ಪಳ: ಆರ್ಎಸ್ಎಸ್ ವಿಷಯವನ್ನು ಕೆದಕಿ ಸಚಿವ ಪ್ರಿಯಾಂಕ್ ಖರ್ಗೆ ಜೋಕರ್ ಆಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.

ತಾಲ್ಲೂಕಿನ ಮೆತಗಲ್ನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ ‘ನಮ್ಮ ಪಕ್ಷದ ಹಿರಿಯರೆಲ್ಲ ಈ ವಿಷಯ ಮಾತಾಡಿದ್ದಾರೆ. ಪ್ರಿಯಾಂಕ್ ಖರ್ಗೆಗೆ ಏನು ಮಾತನಾಡಬೇಕು, ಮಾತನಾಡಬಾರದು ಎನ್ನುವುದೇ ಗೊತ್ತಿಲ್ಲ. ದೇಶದ ಸುರಕ್ಷತೆಗೆ, ಹುಟ್ಟಿರುವ ಮಗುವಿಗೆ ಸಂಸ್ಕಾರ ಕಲಿಸುವ ರಾಷ್ಟ್ರೀಯ ಮಟ್ಟದ ಸಂಸ್ಥೆ ಆರ್ಎಸ್ಎಸ್ ಬಗ್ಗೆ ಪ್ರಿಯಾಂಕ್ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆಯೇ’ ಎಂದು ಪ್ರಶ್ನಿಸಿದರು.

‘ರಾಜ್ಯದಲ್ಲಿ ಜನರಿಗೆ ರಕ್ಷಣೆಯಿಲ್ಲ, ಪೊಲೀಸರಿಗು ಕೂಡ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರಿಗೆ ₹50 ಕೋಟಿ ಹಾಗೂ ನನಗೆ ₹25 ಕೋಟಿ ಮಾತ್ರ ಕೊಟ್ಟಿದ್ದಾರೆ. ರಾಜ್ಯದಿಂದ ಅನೇಕ ಕಂಪನಿಗಳು ನೆರೆ ರಾಜ್ಯಗಳಿಗೆ ಹೋಗುತ್ತಿರುವುದರಿಂದ ಉದ್ಯೋಗದ ಅವಕಾಶಗಳು ತಪ್ಪುತ್ತಿವೆ’ ಎಂದರು.
.ಸರ್ಕಾರದ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ.ಆರ್ಎಸ್ಎಸ್ ವಿಜಯದಶಮಿ ಉತ್ಸವ: ಸಾವಿರಾರು ಗಣವೇಷಧಾರಿಗಳಿಂದ ಪಥಸಂಚಲನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.