ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಲೇಜು ಅಭಿವೃದ್ಧಿಗೆ ಶ್ರಮಿಸುವೆ: ಪರಣ್ಣ ಮುನವಳ್ಳಿ

Last Updated 15 ಫೆಬ್ರುವರಿ 2021, 12:49 IST
ಅಕ್ಷರ ಗಾತ್ರ

ಗಂಗಾವತಿ: ‘ಅನುದಾನ ತಂದು ನಗರದ ಕೃಷಿ ಕಾಲೇಜು ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.

ನಗರದ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿರುವ ಕೃಷಿ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಮಾತನಾಡಿದರು.

‘ಕಾಲೇಜಿಗೆ ಮೂಲ ಸೌಕರ್ಯ ಒದಗಿಸಲಾಗುವುದು. ಬಿ.ಎಸ್ಸಿ ಅಗ್ರಿ ತರಗತಿಗಳು ಆರಂಭವಾಗಿವೆ. ಒಟ್ಟು 37 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಇದೆ. ಅದರಲ್ಲಿ 18 ಪುರುಷರು ಹಾಗೂ 11 ಮಹಿಳೆಯರು ಸೇರಿ ಒಟ್ಟು 29 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಮೂರು ಸೀಟ್‌ಗಳು ಬಾಕಿ ಇವೆ. ಭರ್ತಿ ಮಾಡಲಾಗುವುದು’ ಎಂದು ಹೇಳಿದರು.

ನಂತರ ಕಾಲೇಜಿಗೆ ಬೇಕಾದ ಮೂಲ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ರಾಯಚೂರು ಕೃಷಿ ವಿಶ್ವ ವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯ ಜೀ.ಶ್ರೀಧರ ಕೇಸರಹಟ್ಟಿ, ಕಾಲೇಜಿನ ಪ್ರಾಚಾರ್ಯ ಲೋಕೇಶ, ವಿಜ್ಞಾನಿಗಳಾದ ಬಿ.ಜಿ.ಮಸ್ತಾನರೆಡ್ಡಿ, ಡಾ.ವೀರರೆಡ್ಡಿ ಹಾಗೂ ಬಗರ ಹುಕಂ ಅಕ್ರಮ ಸಕ್ರಮ ಸಮಿತಿ ಸದಸ್ಯ ಸಿದ್ದಲಿಂಗಯ್ಯ ಗಡ್ಡಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT