ಮಂಗಳವಾರ, ಜೂನ್ 15, 2021
24 °C

ಆರೈಕೆ ಕೇಂದ್ರಕ್ಕೆ ಶಾಸಕ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಇಲ್ಲಿನ ಹಿರೇಹಳ್ಳದ ಬಸವೇಶ್ವರ ದೇವಸ್ಥಾನದ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆದಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಶಾಸಕ ಬಸವರಾಜ ದಢೇಸೂಗೂರು ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿದ ಶಾಸಕ ಬಸವರಾಜ ದಢೇಸೂಗುರು ಅವರು

ಕೊರೊನಾ ಎರಡನೇಯ ಅಲೆ ವ್ಯಾಪಕವಾಗಿ ಹರಡುತ್ತಿರುವ ಕಾರಣ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಸೋಂಕಿತರ ಆರೋಗ್ಯ ರಕ್ಷಣೆಗಾಗಿ ಕೇಂದ್ರ ತೆರೆಯಲಾಗಿದೆ. ಸದ್ಯ ಕೇಂದ್ರದಲ್ಲಿ 50 ಬೆಡ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತದ ವತಿಯಿಂದ ಸೋಂಕಿತರಿಗೆ ಆಹಾರ ಸೌಲಭ್ಯ ಒದಗಿಸಲಾಗುತ್ತಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಬೇಕು ಎಂದು ಹೇಳಿದರು.

‘ಕೊರೊನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಘೋಷಣೆ ಮಾಡಿರುವುದು ಒಳ್ಳೆಯ ಬೆಳವಣಿಗೆ. ರಾಜ್ಯದ ಜನತೆಯ ಆರೋಗ್ಯ ರಕ್ಷಣೆಗೆ ಸರ್ಕಾರ ಸಾಕಷ್ಟು ಪರಿಶ್ರಮ ಪಡುತ್ತಿದೆ’ ಎಂದರು.

ಕೋವಿಡ್ ಕೇರ್ ಕೇಂದ್ರಕ್ಕೆ ಅಧಿಕಾರಿಗಳು ದಿನಲೂ ಭೇಟಿ ನೀಡಿ ತಪಾಸಣೆ ನಡೆಸಬೇಕು. ಅಗತ್ಯ ಸೌಲಭ್ಯ ಕಲ್ಪಿಸಿ ಮಾದರಿ ಕೇಂದ್ರವನ್ನಾಗಿ ಮಾಡಬೇಕು ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್, ತಹಶೀಲ್ದಾರ್ ರವಿ ಅಂಗಡಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಡಾ. ಮೋಹನ್, ಜಿಪಂ ಇಒ ಸತೀಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಸಂಜೀವಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಸಿಪಿಐ ಉದಯರವಿ, ಸಮಾಜ ಕಲ್ಯಾಣ ಅಧಿಕಾರಿ ತುಗ್ಲೆಪ್ಪ ದೇಸಾಯಿ, ಪಟ್ಟಣ ಪಂಚಾಯಿತಿ ಸದಸ್ಯ ಮಂಜುನಾಥರೆಡ್ಡಿ ಮಾದಿನಾಳ, ಮುಖ್ಯಾಧಿಕಾರಿ ತಿರುಮಲಮ್ಮ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಅಧಿಕಾರಿಗಳು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.