ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ: ಕೊಪ್ಪಳ ಜಿಲ್ಲೆಯಲ್ಲಿ 13.743 ಮತದಾರರು

Published 2 ಜೂನ್ 2024, 14:07 IST
Last Updated 2 ಜೂನ್ 2024, 14:07 IST
ಅಕ್ಷರ ಗಾತ್ರ

ಕೊಪ್ಪಳ: ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನ ಸೋಮವಾರ ನಡೆಯಲಿದ್ದು, ಜಿಲ್ಲೆಯಲ್ಲಿ 13,743 ಮತದಾರರಿದ್ದಾರೆ.

9,162 ಪುರುಷರು ಹಾಗೂ 4581 ಮಹಿಳೆಯರು ಇದ್ದಾರೆ. ಜಿಲ್ಲೆಯಲ್ಲಿ 24 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕುಷ್ಟಗಿ ತಾಲ್ಲೂಕಿನಲ್ಲಿ 5, ಕಾರಟಗಿಯಲ್ಲಿ 2, ಕನಕಗಿರಿಯಲ್ಲಿ 3, ಗಂಗಾವತಿಯಲ್ಲಿ 4, ಯಲಬುರ್ಗಾದಲ್ಲಿ 2, ಕುಕನೂರಿನಲ್ಲಿ 2, ಕೊಪ್ಪಳದಲ್ಲಿ 6 ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಭಾನುವಾರ ಆಯಾ ತಹಶೀಲ್ದಾರ್‌ ಕಚೇರಿಗಳಲ್ಲಿ ಮಸ್ಟರಿಂಗ್‌ ಕಾರ್ಯ ಜರುಗಿತು.

ಬೆಳಿಗ್ಗೆ 8 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದ್ದು, ಸಂಜೆ ತಹಶೀಲ್ದಾರ್‌ ಕಚೇರಿಗಳಲ್ಲಿ ಡಿ ಮಸ್ಟರಿಂಗ್‌ ಕಾರ್ಯ ಜರುಗಲಿದೆ.

‘ಈ ಚುನಾವಣೆಯು ಪ್ರಾಶಸ್ತ್ಯ ಮತದಾನವಾಗಿರುತ್ತದೆ. ಮತದಾರರು ಮತಪತ್ರದಲ್ಲಿ ಅಭ್ಯರ್ಥಿಗೆ ಪ್ರಾಶಸ್ತ್ಯ ಮತ ನೀಡಬೇಕು. ಮತಗಟ್ಟೆಯಲ್ಲಿ ಮತದಾರರು ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಮತಪತ್ರದಲ್ಲಿ ಸಹಿ, ಹೆಸರು, ಪಕ್ಷದ ಗುರುತು ಅಥವಾ ಯಾವುದೇ ಚಿತ್ರದ ಗುರುತು ಮಾಡಬಾರದು. ಮತಗಟ್ಟೆಯಲ್ಲಿ ನೀಡಲಾಗುವ ಪೆನ್ನಿನಿಂದ ಮಾತ್ರ ಮತ ಚಲಾಯಿಸಬೇಕು’ ಎಂದರು.

‘ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಹಾಗೂ 6 ಮತಗಟ್ಟೆಗಳಲ್ಲಿ ವಿಡಿಯೊಗ್ರಾಫಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಮತದಾನ ಕೇಂದ್ರಗಳಿಗೆ 17 ಸೆಕ್ಟರ್ ರೂಟ್‌ಗಳನ್ನು ಗುರುತಿಸಲಾಗಿದೆ ಮತ್ತು ಚುನಾವಣಾ ಪ್ರಕ್ರಿಯೆಗಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT