ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಾಪ ರೆಡ್ಡಿ ಅವರನ್ನು ಬೆಂಬಲಿಸಲು ಮನವಿ

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ
Published 26 ಮೇ 2024, 14:36 IST
Last Updated 26 ಮೇ 2024, 14:36 IST
ಅಕ್ಷರ ಗಾತ್ರ

ಯಲಬುರ್ಗಾ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ನಿರುದ್ಯೋಗಿ ವಿದ್ಯಾವಂತ ಯುವಕರಿಗೆ ಉದ್ಯೋಗ, ಸ್ವಯಂ ಉದ್ಯೋಗಕ್ಕಾಗಿ ಕೌಶಲ ತರಬೇತಿಗೆ ಪ್ರೋತ್ಸಾಹ ಹಾಗೂ ಈ ಭಾಗದ ಶಿಕ್ಷಕರ ಮತ್ತು ಪದವೀಧರರ ಕಲ್ಯಾಣಕ್ಕೆ ಶ್ರಮಿಸಲು ಪಣ ತೊಟ್ಟಿರುವ ಎನ್. ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಬೇಕು ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ನಿರ್ದೇಶಕ ಪ್ರದೀಪ ಗುಡ್ಡದ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದರು. ಈ ಸಲದ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲ ಜಿಲ್ಲೆಯ ಮತದಾರರು ಇವರನ್ನು ಬೆಂಬಲಿಸುವ ವಿಶ್ವಾಸ ವ್ಯಕ್ತಪಡಿಸುತ್ತಿರುವುದರಿಂದ ಗೆಲವು ನಿಶ್ಚಿತವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿರುವ ಪ್ರತಾಪ ರೆಡ್ಡಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡುವ ಮೂಲಕ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಇದೇ ಜೂನ್‌ 3ರಂದು ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ಕ್ರಮ ಸಂಖ್ಯೆ 6ರಲ್ಲಿರುವ ಇವರ ಹೆಸರಿನ ಮುಂದೆ ರೋಮನ್ ಅಂಕಿ 1 ಅನ್ನು ಮಾರ್ಕ್ ಮಾಡುವ ಮೂಲಕ ಹಕ್ಕು ಚಲಾಯಿಸಬೇಕು. ಗುರುತು ಹಾಕುವ ಪೆನ್ ಕೂಡಾ ಚುನಾವಣಾ ಅಧಿಕಾರಿಗಳು ಒದಗಿಸುತ್ತಾರೆ. ತಪ್ಪದೇ ಮತ ನೀಡಬೇಕು ಎಂದು ಕೋರಿದರು.

ಕಾಲೇಜಿನ ಉಪನ್ಯಾಸಕರು ಹಾಗೂ ಇತರೆ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT