ಕನಕಗಿರಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಭ್ರಷ್ಟಾಚಾರ ರಹಿತ ಸರ್ಕಾರವಾಗಿದ್ದು, ಜನಪರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ತಿಳಿಸಿದರು.

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಮೋದಿ ಸರ್ಕಾರದ 11ನೇ ವರ್ಷದ ವರ್ಷಾಚರಣೆ ಹಾಗೂ ಈಚೆಗೆ ನಿಧನರಾದ ಪಕ್ಷದ ಜಿಲ್ಲಾ ಕೋಶಾಧ್ಯಕ್ಷ ನರಸಿಂಗರಾವ್ ಕುಲಕರ್ಣಿ ಅವರ ಶ್ರದ್ಧಾಂಜಲಿ, ಇತರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಡವರು, ದೀನದಲಿತರ ಸರ್ವಾಂಗೀಣ ಪ್ರಗತಿಗೆ ಮೋದಿ ಅವರು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರ ಏಳಿಗೆಗೆ ಶ್ರಮಿಸುತ್ತಿದ್ದಾರೆ ಎಂದರು.

ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದ ನರಸಿಂಗರಾವ್ ಕುಲಕರ್ಣಿ ಆಕಸ್ಮಿಕ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟಿಸಿದ್ದಾರೆ ಅವರ ಸೇವೆ ಸ್ಮರಣೀಯ ಎಂದು ತಿಳಿಸಿದರು.

ಜಿಲ್ಲಾ ಸಂಚಾಲಕ ಜಿ. ಶ್ರೀಧರ ಅವರು ಬಿಜೆಪಿ ಹಾಗೂ ಮೋದಿ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಿದರು.

ಮಂಡಲ ಅಧ್ಯಕ್ಷ ಸಣ್ಣ ಕನಕಪ್ಪ, ನಿಕಟ ಪೂರ್ವ ಅಧ್ಯಕ್ಷ ಮಹಾಂತೇಶ್ ಸಜ್ಜನ, ಜಿಲ್ಲಾ ಕೆಡಿಪಿ ಮಾಜಿ ಸದಸ್ಯ ಗುರನಗೌಡ ಪಾಟೀಲ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುರೇಶ ಗುಗ್ಗಳಶೆಟ್ರ, ಶೇಷಪ್ಪ ಪೂಜಾರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷ ಭೀಮನಗೌಡ ಹರ್ಲಾಪುರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗ್ಯಾನಪ್ಪ ಗಾಣದಾಳ, ಪ್ರಕಾಶ ಹಾದಿಮನಿ, ಶಿವಾನಂದ ಬೆನಕನಾಳ, ಶಕ್ತಿ ಕೇಂದ್ರದ ಅಧ್ಯಕ್ಷ ಶಿವಕುಮಾರ ಕೋರಿಶೆಟ್ಟರ ಇದ್ದರು.

ನರಸಿಂಗರಾವ್ ಅವರ ನಿಧನದ ನಿಮಿತ್ತ ಮೌನಾಚರಣೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.