ಬೆಣಕಲ್ (ಕುಕನೂರು): ‘ಪ್ರಧಾನಿ ನರೇಂದ್ರ ಮೋದಿ, ಸುಭದ್ರ ಆಡಳಿತ ನಡೆಸುವ ಮೂಲಕ ವಿಶ್ವವೇ ಮೆಚ್ಚುವ ನಾಯಕರಾಗಿದ್ದಾರೆ’ ಎಂದು ಗಣಿ ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ ಹೇಳಿದರು.

ತಾಲ್ಲೂಕಿನ ಬೆಣಕಲ್ ಗ್ರಾಮದಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಅನುದಾನ ನೀಡುವ ಮೂಲಕ ಗ್ರಾಮೀಣಾಭಿವೃದ್ಧಿಗೆ ಬದ್ಧವಾಗಿವೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ರೈತಪರ ಕಾಳಜಿಯನ್ನು ಇಟ್ಟುಕೊಂಡು ಕೃಷಿ ಸಮ್ಮಾನ ಯೋಜನೆಗೆ ₹ 6 ಸಾವಿರ ನೀಡಿದರೆ ಇತ್ತ ರಾಜ್ಯದ ಮಾಜಿ ಸಿಎಂ ಯಡಿಯೂರಪ್ಪನವರು ಯೋಜನೆಗೆ ₹ 4 ಸಾವಿರ ಸೇರಿದಂತೆ ರೈತರ ಕೃಷಿ ಚಟುವಟಿಕೆಗಳಿಗಾಗಿ ವರ್ಷಕ್ಕೆ ₹10 ಸಾವಿರ ನೀಡುತ್ತಿರುವುದು ರೈತರ ಪಾಲಿಗೆ ಆಶಾಕಿರಣವಾಗಿದೆ. ಪ್ರತಿವರ್ಷ ರೈತರ ಖಾತೆಗೆ ನೇರವಾಗಿ ಹಣ ಸಂದಾಯವಾಗುತ್ತಿದೆ ಎಂದರು.

ಕ್ಷೇತ್ರದಲ್ಲಿ 30 ವರ್ಷಗಳ ಕಾಲ ಆಡಳಿತ ನಡೆಸಿದ ಮಾಜಿ ಶಾಸಕರು ಜನರ ದಾರಿ ತಪ್ಪಿಸಿ, ರೈತರ ಕಾಳಜಿ ಮರೆತು, ಕೇವಲ ಕಟ್ಟಡಗಳ ನಿರ್ಮಾಣವನ್ನೇ ದೊಡ್ಡ ಸಾಧನೆ ಎನ್ನುವಂತೆ ಅಧಿಕಾರ ಮಾಡಿದ್ದಾರೆ ಎಂದರು.

ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಸ್ತೂರೆಮ್ಮ ನಿಂಗಪ್ಪ, ಅಂದಪ್ಪ ಜವಳಿ, ಈಶಪ್ಪ ಆರೇರ, ವೀರಣ್ಣ ಹುಬ್ಬಳ್ಳಿ, ಶಿವಕುಮಾರ ನಾಗಲಾಪುರಮಠ, ಬಸನಗೌಡ ತೊಂಡಿಹಾಳ, ಮಹಾಂತೇಶ್ ಪಾಟೀಲ, ಮಾರುತಿ ಗಾವರಾಳ, ಕಳಕಪ್ಪ ಕಂಬಳಿ, ಜಗನ್ನಾಥಗೌಡ ಪಾಟೀಲ್, ಗವಿಸಿದ್ದಪ್ಪ ಲೇಬಗೇರಿ, ಫಕ್ಕಿರಪ್ಪ ಮ್ಯಾಗೇರಿ, ಮುತ್ತಣ್ಣ ಹಂಡಿ, ಲೋಕೇಶ್ ಭಜಂತ್ರಿ ಹಾಗೂ ರವಿ ಬನ್ನಿಕೊಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.