ಮಂಗಳವಾರ, ಆಗಸ್ಟ್ 16, 2022
30 °C
ಕೆರೆ ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆ

ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಶಾಸಕ ಹಾಲಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಧೋಳ (ಯಲಬುರ್ಗಾ): ‘ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಅಸ್ತಿತ್ವದಲ್ಲಿವೆ. ಆದ್ದರಿಂದ ಹೆಚ್ಚಿನ ಅನುದಾನ ತಂದು ಜನಪರ ಕಾರ್ಯ ಮಾಡಲು ಸಾಧ್ಯವಾಗುತ್ತಿದೆ’ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.

ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಜಲಾಮೃತ ಯೋಜನೆ ಅಡಿಯಲ್ಲಿ ಕೆರೆ ಜೀರ್ಣೋದ್ಧಾರ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

‘ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ’ ಎಂದರು.

‘ಮುಧೋಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿಯೇ ಈ ಹಿಂದಿನ ಸರ್ಕಾರ ಸುವರ್ಣ ಗ್ರಾಮ ಯೋಜನೆಯನ್ನು ಜಾರಿಗೊಳಿಸಿದೆ. ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಯಾವೊಂದು ಕೆಲಸವೂ ಆಗಿಲ್ಲ. ಆ ಅನುದಾನ ಎಲ್ಲಿ ಹೋಯಿತು. ಅಭಿವೃದ್ಧಿ ಹೆಸರಲ್ಲಿ ನೂರಾರು ಕೋಟಿ ಲೂಟಿಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ತೋಟಗಾರಿಕೆ ಅಧಿಕಾರಿ ಕೃಷ್ಣ ಉಂಕುದನ್, ತಾ.ಪಂ. ಇಒ ಡಾ.ಜಯರಾಂ ಚವ್ಹಾಣ, ಉಪಾಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಸದಸ್ಯ ಶರಣಪ್ಪ ಈಳಗೇರ, ಮುಖಂಡರಾದ ಕಳಕಪ್ಪ ಕಂಬಳಿ, ವೀರಣ್ಣ ಹುಬ್ಬಳ್ಳಿ, ಪ.ಪಂ. ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ವಸಂತಕುಮಾರ ಭಾವಿಮನಿ, ಕಳಕಪ್ಪ ತಳವಾರ, ಸಿದ್ರಾಮೇಶ ಬೇಲೇರಿ, ಜಿ.ಪಂ. ಮಾಜಿ ಸದಸ್ಯ ಸಿ.ಎಚ್. ಪೊಲೀಸ್ ಪಾಟೀಲ, ಪ್ರಭುರಾಜ ಕಲಬುರ್ಗಿ, ರುದ್ರಯ್ಯ ಬಿಳಗಿಮಠ, ಪಿಡಿಒ ಫಕ್ಕೀರಪ್ಪ ಕಟ್ಟಿಮನಿ, ಗ್ರಾ.ಪಂ. ಅಧ್ಯಕ್ಷೆ ಭಾರತಿ ಛಲವಾದಿ ಹಾಗೂ ಉಪಾಧ್ಯಕ್ಷ ಚಂದ್ರಭಾವಿ ಕುದರಿ ಅವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು