ಮುನಿರಾಬಾದ್: ಹುಲಿಗಿಯ ಹುಲಿಗೆಮ್ಮದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಜಾತ್ರೆಗೆ ಬಂದು ಹೋಗುವ ಭಕ್ತರಿಗೆ ಅನುಕೂಲ ಕಲ್ಪಿಸಲು ವಿವಿಧ ತಾಲ್ಲೂಕು ಕೇಂದ್ರದಿಂದ ಹೆಚ್ಚುವರಿ ಬಸ್ಗಳನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಸೂಚನೆ ನೀಡಿದ್ದಾರೆ.

ಶಕ್ತಿದೇವತೆ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಸೇರಿದಂತೆ ಪಕ್ಕದ ರಾಜ್ಯಗಳಿಂದಲೂ ಸಾವಿರಾರು ಭಕ್ತರು ಬರುತ್ತಾರೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಕೊಪ್ಪಳ, ಹೊಸಪೇಟೆ, ಕುಷ್ಟಗಿ ಹಾಗೂ ಗಂಗಾವತಿ ಡಿಪೊಗಳ ವ್ಯವಸ್ಥಾಪಕರು ಹೆಚ್ಚುವರಿ ಬಸ್ ಓಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗೆ ಬಸ್ಗಳ ಕೊರತೆಯಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಅಗ್ನಿಶಾಮಕ ಸೇವೆಯ ಒಂದು ವಾಹನವನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು. ತುಂಗಭದ್ರಾ ನದಿ ತೀರದಲ್ಲಿ ಮೇ 10 ರಿಂದ ಮೇ 14ರ ವರೆಗೆ ತುರ್ತು ಸೇವೆಗೆ ಒಂದು ರೋಪ್ ಸಹಿತ ಬೋಟ್ (ನದಿಯಲ್ಲಿ ಸಂಚರಿಸುವ ದೋಣಿ) ವ್ಯವಸ್ಥೆ ಮಾಡಿಕೊಳ್ಳುವಂತೆ ಪ್ರಾಧಿಕಾರದ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ತೇರಿನ ಗಾಲಿಗಳ ಪರಿಶೀಲನೆ: ರಥೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ, ಅನುಚಿತ ಘಟನೆ ನಡೆಯದಂತೆ ಮುಂಚಿತವಾಗಿ ತೇರಿನ ಗಾಲಿಗಳನ್ನು ಪರೀಕ್ಷಿಸಬೇಕು. ತೇರು ಸಾಗುವ ರಸ್ತೆಯ ಸಾಮರ್ಥ್ಯ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ದೃಢೀಕರಿಸಿ ‘ಅರ್ಹತಾ ಪ್ರಮಾಣ ಪತ್ರ’ವನ್ನು ನೀಡಬೇಕು ಎಂದೂ ಜಿಲ್ಲಾಧಿಕಾರಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ನಿರ್ದೇಶನ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-35-785829770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.