ಮುನಿರಾಬಾದ್: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಯಾತ್ರಾಸ್ಥಳ, ಶಕ್ತಿಪೀಠ ಹುಲಿಗಿಯ ಹುಲಿಗೆಮ್ಮ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಬರುವ ಲಕ್ಷಾಂತರ ಭಕ್ತರ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅಧೀನ ಅಧಿಕಾರಿಗಳಿಗೆಸೂಚನೆ ನೀಡಿದ್ದಾರೆ.

ಈಚೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳಲಾಗಿದೆ. ಬರುವ ಮೇ 1 ಹುಣ್ಣಿಮೆ, 2 ರಂದು ರಾತ್ರಿ 8 ಗಂಟೆಗೆ ದೇವಿಗೆ ಕಂಕಣ ಧಾರಣೆಯೊಂದಿಗೆ ಅಧಿಕೃತ ಜಾತ್ರಾ ಕಾರ್ಯಕ್ರಮಗಳು ಆರಂಭವಾಗಲಿವೆ. ಜಿಲ್ಲೆ ಸೇರಿದಂತೆ ರಾಜ್ಯ, ಹೊರ ರಾಜ್ಯಗಳಿಂದ ಜಾತ್ರೆಗೆ ಬರುವ ಲಕ್ಷಾಂತರ ಭಕ್ತರ ಆರೋಗ್ಯ ರಕ್ಷಣೆ ಮುಖ್ಯ. ಈ ನಿಟ್ಟಿನಲ್ಲಿ ಪರೀಕ್ಷೆಗೊಳಪಡಿಸಿದ ಶುದ್ಧ ಕುಡಿಯುವ ನೀರನ್ನು ಮಾತ್ರ ಭಕ್ತರಿಗೆ ಪೂರೈಸಬೇಕು’ ಎಂದು ಹೇಳಿದ್ದಾರೆ.

‘ಸೊಳ್ಳೆಗಳ ನಿಯಂತ್ರಣಕ್ಕೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ತೆರೆದ ಚರಂಡಿಗಳನ್ನು ಸ್ವಚ್ಛಗೊಳಿಸಿ, ಬ್ಲಿಚಿಂಗ್ ಪೌಡರ್ ಹಾಕಿ ಸ್ವಚ್ಛತೆ ಕಾಪಾಡಬೇಕು. ದಾಸೋಹದಲ್ಲಿ ಭಕ್ತರಿಗೆ ವಿತರಿಸುವ ಪ್ರಸಾದವನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲಿಸಬೇಕು. ಭಕ್ತರ ಆರೋಗ್ಯ ತುರ್ತು ಚಿಕಿತ್ಸೆಗೆ 5 ದಿನಗಳ ಕಾಲ ಹೆಚ್ಚುವರಿ ವೈದ್ಯರು ಮತ್ತು ಸಿಬ್ಬಂದಿಯನ್ನು ನಿಯೋಜಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ದೇವಸ್ಥಾನದ ಹತ್ತಿರ ತಾತ್ಕಾಲಿಕ ಆರೋಗ್ಯ ಕೇಂದ್ರ, ಮುನಿರಾಬಾದ್ ಡ್ಯಾಂನಲ್ಲಿ ತುರ್ತು ಚಿಕಿತ್ಸಾ ಘಟಕ ಮತ್ತು 2 ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಟಿ. ಲಿಂಗರಾಜು ಸಭೆಗೆ ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-35-1239627028

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.