ಮುನಿರಾಬಾದ್: ಸಮೀಪದ ಹೊಸ ಬಂಡಿಹರ್ಲಾಪುರ ಗ್ರಾ.ಪಂ ಆವರಣದಲ್ಲಿ ಮಂಗಳವಾರ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ಋತುಚಕ್ರ ನೈರ್ಮಲ್ಯ’ ದಿನ ಆಚರಿಸಲಾಯಿತು.

ಜಿ.ಪಂ ಸ್ವಚ್ಛ ಭಾರತ ಮಿಷನ್ ಯೋಜನೆಯ ಸ್ಯಾನಿಟೇಷನ್ ಮತ್ತು ಹೈಜೀನ್ ವಿಭಾಗದ ಸಮಾಲೋಚಕಿ ಬಸಮ್ಮ ಹುಡೇದ ಮಾತನಾಡಿ, ‘ಪ್ರತಿಯೊಬ್ಬ ಮಹಿಳೆ ಮಾಸಿಕ ಋತುಚಕ್ರ ಸಂದರ್ಭದಲ್ಲಿ ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಿ, ಸ್ಯಾನಿಟರಿ ಪ್ಯಾಡ್ ಬಳಕೆಗೆ ಒತ್ತು ನೀಡಬೇಕು. ಮುಟ್ಟಿನ ಸಮಯದಲ್ಲಿ ಮಾಸಿಕ ಋತುಚಕ್ರ ನಿರ್ವಹಣೆ, ಶುಚಿಯಾದ ಬಟ್ಟೆ ಬಳಕೆ ಹಾಗೂ ಸ್ಯಾನಿಟರಿ ಪ್ಯಾಡ್ ಬಳಕೆಯಿಂದ ವೈಯಕ್ತಿಕ ಸ್ವಚ್ಛತೆ ಹೊಂದಬಹುದು. ಬಳಸಿದ ಪ್ಯಾಡ್ಗಳನ್ನು ‘ಇನ್ಸಿನರೇಟರ್’ ಮೂಲಕ ವೈಜ್ಞಾನಿಕ ವಿಲೇವಾರಿ ಬಗ್ಗೆ ಮಾಹಿತಿ ಹಂಚಿಕೊಂಡರು. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಇನ್ಸಿನರೇಟರ್ ಯಂತ್ರ ಅಳವಡಿಸಲಾಗುವುದು. ಬಳಸಿದ ಪ್ಯಾಡ್ಗಳನ್ನು ಎಲ್ಲೆಂದರಲ್ಲಿ ಬಿಸಾಡದೇ ನಿರ್ದಿಷ್ಟ ಜಾಗದಲ್ಲಿ ಮಾತ್ರ ವಿಲೇವಾರಿ ಮಾಡಬೇಕು ಎಂದು ಸಲಹೆ ನೀಡಿದರು.

ಪಿಡಿಒ ಅಶೋಕ ರಾಂಪುರ ಮಾತನಾಡಿ, ‘ಇಂದಿನ ಒತ್ತಡದ ಜೀವನದಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯಕರ ಬದುಕಿಗಾಗಿ ಕೆಲವು ಆರೋಗ್ಯ ಸಲಹೆಗಳನ್ನು ಪಾಲಿಸಬೇಕು’ ಎಂದು ಹೇಳಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ತಮ್ಮಣ್ಣ ಮತ್ತು ಕಲ್ಪನಾ, ಕೆಎಚ್ಟಿಟಿ ಸಂಯೋಜಕಿ ಪುಷ್ಪಾ, ಗ್ರಾ.ಪಂ ಕಾರ್ಯದರ್ಶಿ ಕೆ. ನಾಗಪ್ಪ, ವಿದ್ಯಾರ್ಥಿಗಳು, ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-35-1424402082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.