ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಗಟ್ಟೆಗೆ ತೆರಳಿದ ಚುನಾವಣಾ ಸಿಬ್ಬಂದಿ

ಸ್ಥಳೀಯ ಸಂಸ್ಥೆ ಚುನಾವಣೆ: 61 ಮತಗಟ್ಟೆಗಳ ಸ್ಥಾಪನೆ, 292 ಅಧಿಕಾರಿಗಳ ನೇಮಕ
Last Updated 30 ಆಗಸ್ಟ್ 2018, 12:52 IST
ಅಕ್ಷರ ಗಾತ್ರ

ಕೊಪ್ಪಳ: ನಗರ, ಸ್ಥಳೀಯ ಸಂಸ್ಥೆ ಸಾರ್ವತ್ರಿಕ ಚುನಾವಣೆ ನಿಮಿತ್ತಆ.31 ರಂದು ಮತದಾನ ನಡೆಯಿದ್ದು, ಮತಗಟ್ಟೆ ಸಿಬ್ಬಂದಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಗುರುವಾರನಡೆಯಿತು.

ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡ್‍ಗಳಿದ್ದು, ಇಲ್ಲಿ 61 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಗೆ ತಲಾ ಒಬ್ಬರು ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಇಬ್ಬರು ಮತಗಟ್ಟೆ ಸಹಾಯಕರನ್ನು ನೇಮಿಸಲಾಗಿದೆ. ಒಟ್ಟು 292 ಅಧಿಕಾರಿ, ಸಿಬ್ಬಂದಿಯನ್ನು ನೇಮಿಸಲಾಗಿದೆ.

ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದುಕೊಂಡು ಹೋಗಲು ಕ್ರೂಸರ್ ಹಾಗೂ ಜೀಪ್‍ ವಾಹನಗಳು ಕಾಲೇಜು ಆವರಣದಲ್ಲಿ ಜಮಾವಣೆಗೊಂಡಿದ್ದವು.

ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ವಿತರಿಸಲು ಕೊಠಡಿ ಸ್ಥಾಪಿಸಲಾಗಿತ್ತು. ಸಂಬಂಧಪಟ್ಟ ಮತಗಟ್ಟೆ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ನಡೆಯಿತು. ಅಧಿಕಾರಿ, ಸಿಬ್ಬಂದಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು.

ನಗರಸಭೆ ಕ್ಷೇತ್ರ ವ್ಯಾಪ್ತಿಗೆ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಜಿಲ್ಲಾ ಪಂಚಾಯ್ತಿಉಪಕಾರ್ಯದರ್ಶಿ ಎನ್.ಕೆ. ತೊರವಿ ಮಸ್ಟರಿಂಗ್ ಕಾರ್ಯದ ಮೇಲ್ವಿಚಾರಣೆ ವಹಿಸಿಕೊಂಡಿದ್ದರು.

ತಹಶೀಲ್ದಾರ್ ಗುರುಬಸವರಾಜ್, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಚುನಾವಣಾಧಿಕಾರಿಗಳಾದ ಕೃಷ್ಣಮೂರ್ತಿ, ಮೆಹಮೂದ್, ಕೃಷ್ಣ ಉಕ್ಕುಂದ, ಚಿದಾನಂದ ನೇತೃತ್ವ ವಹಿಸಿದ್ದರು. ಮತದಾನ ಬೆಳಿಗ್ಗೆ 7 ರಿಂದ ಸಂಜೆ 5ರವರೆಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT