ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಬುರ್ಗಾ: ಆರ್ಥಿಕ ಸಬಲತೆಗೆ ನರೇಗಾ ವರದಾನ

Published 7 ಏಪ್ರಿಲ್ 2024, 15:54 IST
Last Updated 7 ಏಪ್ರಿಲ್ 2024, 15:54 IST
ಅಕ್ಷರ ಗಾತ್ರ

ಯಲಬುರ್ಗಾ: ತಾಲ್ಲೂಕಿನ ಸಂಗನಾಳ ಗ್ರಾಮದ ಹೊರವಲಯದಲ್ಲಿ ನಡೆದ ನಾಲಾ ಅಭಿವೃದ್ಧಿ ಕಾಮಗಾರಿ ಸ್ಥಳದಲ್ಲಿ ನರೇಗಾ ಜಾಗೃತಿ ಅಭಿಯಾನ ಕಾರ್ಯಕ್ರಮ ಜರುಗಿತು.

ನೇತೃತ್ವ ವಹಿಸಿದ್ದ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್‍ಪಾಟೀಲ ಮಾತನಾಡಿ,‘ರೈತರು ವೈಯಕ್ತಿಕ ವಿವಿಧ ಕಾಮಗಾರಿಗಳನ್ನು ನಿರ್ವಹಿಸಿ ಅಭಿವೃದ್ಧಿಗೊಳ್ಳಲು ಹಾಗೂ ಆರ್ಥಿಕವಾಗಿ ಸಬಲರಾಗಲು ಉದ್ಯೋಗ ಖಾತ್ರಿ ಯೋಜನೆ ವರದಾನವಾಗಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಹೇಳಿದರು.

‌‘ಬೇರೆ ಕಡೆ ಕೆಲಸ ಹುಡುಕಿಕೊಂಡು ಹೋಗುವ ಬದಲು ಸ್ಥಳೀಯವಾಗಿಯೇ ಕೆಲಸ ಮಾಡಿ ಕೂಲಿ ಪಡೆದು ನೆಮ್ಮದಿಯಿಂದ ಇರಬಹುದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹೆಚ್ಚು ಅರಿವು ಮೂಡಿಸುತ್ತಿದೆ. ವಿಶೇಷವಾಗಿ ಮಹಿಳೆಯರಿಗೆ ಖಾತ್ರಿ ಯೋಜನೆಯಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿ ಕೊಡಲಾಗುತ್ತಿದೆ’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಮಾತನಾಡಿ,‘ಹೊಸದಾಗಿ ಉದ್ಯೋಗ ಬಯಸುವವರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪಂಚಾಯಿತಿಗೆ ಸಲ್ಲಿಸಿದರೆ ಉದ್ಯೋಗ ಕಲ್ಪಿಸಿಕೊಡಲು ಸಾಧ್ಯವಾಗುತ್ತದೆ. ಇದರ ಪ್ರಯೋಜನ ಪಡೆದುಕೊಂಡು ಆರ್ಥಿಕ ಸುಧಾರಣೆಗೆ ಮುಂದಾಗಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಸಂತೋಷ ನಂದಾಪೂರ ಮಾತನಾಡಿ, ನರೇಗಾ ಕಾರ್ಮಿಕರು ಕಡ್ಡಾಯವಾಗಿ ಮತದಾನ ಮಾಡಬೇಕು. ಹಾಗೆಯೇ ಕುಟುಂಬದ ಸದಸ್ಯರಿಗೆ ಕಡ್ಡಾಯ ಮತದಾನಕ್ಕೆ ಪ್ರೇರಣೆ ನೀಡಿ ಹೆಚ್ಚಿನ ಪ್ರಮಾಣದ ಮತದಾನಕ್ಕೆ ಕಾರಣರಾಗಬೇಕು. ಯುವ ಮತದಾರರು ಸಂಭ್ರಮದಿಂದಲೇ ಹಕ್ಕು ಚಲಾಯಿಸಬೇಕು’ ಎಂದು ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರ್ವಮಂಗಳ, ಕರವಸೂಲಿಗಾರ ಶರಣಪ್ಪ, ಬಿಎಫ್‍ಟಿ ಶಿವಪ್ಪ ಸೂಡಿ ಸೇರಿ ಅನೇಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT