ಕೊಪ್ಪಳ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಜಿಲ್ಲೆಯಾದ್ಯಂತ 5,676 ಪ್ರಕರಣಗಳು ಇತ್ಯರ್ಥಗೊಂಡಿವೆ.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಗಂಗಾವತಿ, ಕುಷ್ಟಗಿ, ಯಲಬುರ್ಗಾ ಮತ್ತು ಕೊಪ್ಪಳ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತ್ ಏರ್ಪಡಿಸಲಾಗಿತ್ತು. ಈ ಲೋಕ್ ಅದಾಲತ್ನಲ್ಲಿ ವಿಮೆ, ನೀರಿನ ಬಿಲ್, ಮೋಟಾರ್ ವಾಹನ ಅಪಘಾತ ಸೇರಿದಂತೆ ವಿವಿಧ ಪ್ರಕರಣಗಳ ಇತ್ಯರ್ಥ ಮಾಡಲಾದ ಒಟ್ಟು ಮೌಲ್ಯ ₹45,18,16,424 ಆಗಿದೆ. ಪೂರ್ವ ದಾವೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 45,088 ಪ್ರಕರಣಗಳ ಪೈಕಿ 41,642 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇತ್ಯರ್ಥ ಪಡಿಸಲಾದ ಒಟ್ಟು ಮೌಲ್ಯ ₹4,14,26,530 ಆಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್ ದರಗದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಂದಾದ ದಂಪತಿಗಳು:

ಕೊಪ್ಪಳದಲ್ಲಿ ಏಳು ಮತ್ತು ಗಂಗಾವತಿ ತಾಲ್ಲೂಕಿನಲ್ಲಿ ಒಂದು ಸೇರಿ ಜಿಲ್ಲೆಯ ಎಂಟು ಜೋಡಿಗಳು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ಈ ದಂಪತಿಗಳನ್ನು ನ್ಯಾಯಾಧೀಶರು ಹಾಗೂ ವಕೀಲರು ಮನವಲಿಸಿ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಮತ್ತೇ ಒಂದಾಗಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.