ಗಂಗಾವತಿ: ತಾಲ್ಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಕಿ ಮಾಂತ್ರಿಕ ಮೇಜರ ಧ್ಯಾನಚಂದ್ ಜಯಂತಿ ನಿಮಿತ್ತ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಯಿತು. ಈ ವೇಳೆ ಕ್ರೀಡಾಳುಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ಪ್ರೊ.ಕರಿಗೂಳಿ ಮಾತನಾಡಿ, ಯುವಜನರು ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು. ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ ಮಹತ್ವದ್ದಿದೆ. ಈಚೆಗೆ ಯುವಜನರು ಕ್ರೀಡೆ ಬದಿಗೊತ್ತಿ ಮೊಬೈಲ್ ಬಳಕೆಗೆ ದಾಸರಾಗಿ ಆನ್ಲೈನ್ ಆಟಗಳಲ್ಲಿ ಮೈಮರೆತು ಸಮಯ, ಹಣ, ವ್ಯರ್ಥ ಮಾಡುತ್ತ, ಕುಟುಂಬಗಳನ್ನು ಸಾಲಕ್ಕೆ ದೂಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಯುವಜನರು ಆನ್ಲೈನ್ ಜೂಜು ಸೇರಿದಂತೆ ಮಾದಕ ವಸ್ತು ಗಳ ಸೇವನೆಯಿಂದ ದೂರವಿರಬೇಕು. ಇಂತಹ ದುಶ್ಚಟಗಳಿಂದ ದೂರವಿರಬೇಕು. ಕ್ರೀಡೆಗಳತ್ತ ಹೆಚ್ಚಿನ ಒಲವು ತೋರಿಸಿ, ಅವುಗಳನ್ನು ಮೈಗೂಡಿಸಿಕೊಳ್ಳಬೇಕು. ಹಾಗೇ ವ್ಯಾಯಾಮ, ಯೋಗವನ್ನೂ ಅಭ್ಯಾಸ ಮಾಡಬೇಕು’ ಎಂದು ಸಲಹೆ ನೀಡಿದರು.

ಸಹಾಯಕ ಪ್ರಾಧ್ಯಾಪಕರ ಶಂಕ್ರಪ್ಪ ಎಂ. ಅವರು ರಾಷ್ಟ್ರೀಯ ಕ್ರೀಡಾ ದಿನ ಮತ್ತು ಧ್ಯಾನಚಂದ್ ಸಾಧನೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಹ ಪ್ರಾಧ್ಯಾಪಕ ಸರಫರಾಜ್ ಅಹ್ಮದ್, ಐಕ್ಯೂಎಸಿ ಸಂಚಾಲಕ ರವಿಕುಮಾರ, ಸಹಾಯಕ ಪ್ರಾಧ್ಯಾಪಕ ವೀರೇಶ, ವಿರೂಪಾಕ್ಷ ಕೆ., ಆಡಳಿತ ಸಿಬ್ಬಂದಿ ಜಬೀನಾ ಬೇಗಂ, ವಿನಾಯಕ, ಚಿನ್ನ ವರಪ್ರಸಾದ, ಶರಣ, ಶಾಂತಿ ಸೇರಿ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.