ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನವಲಿ | ಕಬ್ಬಡಿ ಪಂದ್ಯಾಟ: ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Published : 23 ಸೆಪ್ಟೆಂಬರ್ 2023, 15:49 IST
Last Updated : 23 ಸೆಪ್ಟೆಂಬರ್ 2023, 15:49 IST
ಫಾಲೋ ಮಾಡಿ
Comments

ಕನಕಗಿರಿ: ಸಮೀಪದ ನವಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯಶಿಕ್ಷಕ ಪರಯ್ಯ ಅರವಟಗಿಮಠ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಗಂಗಾವತಿ ಅವರ ಆಶ್ರಯದಲ್ಲಿ ಶನಿವಾರ ಗಂಗಾವತಿಯ ಜೆಎಸ್‌ಎಸ್ ಕಾಲೇಜು ಮೈದಾನದಲ್ಲಿ ನಡೆದ ಪ್ರೌಢಶಾಲಾ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಪ್ರಥಮ‌ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಲ್ಲದಿದ್ದರೂ ಇತರೆ ಶಿಕ್ಷಕರ ಮಾರ್ಗದರ್ಶನ ಹಾಗೂ ಸ್ಥಳೀಯರ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಸಾಧನೆ ಮಾಡಿರುವುದಕ್ಕೆ ಜನಪ್ರತಿನಿಧಿಗಳು ಹಾಗೂ ಶಾಲೆಯ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT