ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚು ಮಾಡುತ್ತಿರುವ ಹಣವನ್ನು ನವಲಿ ಸಮಾನಾಂತರ ಜಲಾಶಯ ಯೋಜನೆಗೆ ವಿನಿಯೋಜಿಸಿದ್ದರೆ ರೈತರಿಗಾದರೂ ಅನುಕೂಲವಾಗುತ್ತಿತ್ತು ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
ತಾಲ್ಲೂಕಿನ ತುಂಗಭದ್ರಾ ಜಲಾಶಯಕ್ಕೆ ಭಾನುವಾರ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಜಲಾಶಯ ಖಾಲಿಯಿದ್ದಾಗ ಸರಿಯಾಗಿ ನಿರ್ವಹಣೆ ಮಾಡಬೇಕಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಲು ಸರ್ಕಾರದ ಬಳಿ ಈಗ ಉತ್ತರವೇ ಇಲ್ಲ. ಜಲಾಶಯ ನಿರ್ಮಾಣಕ್ಕೆ ಸರ್ಕಾರ ಟೆಂಡರ್ ಕರೆಯಬೇಕಿತ್ತು. ಈ ಯಾವ ಕೆಲಸವನ್ನೂ ಮಾಡಿಲ್ಲ’ ಎಂದು ಟೀಕಿಸಿದರು.
‘ಜಲಾಶಯದ ನೀರು ಹರಿಬಿಡುವ ಮೂಲಕ ಇಲ್ಲಿನ ರೈತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ಸರ್ಕಾರ ನಡೆಸಲು ಕಾಂಗ್ರೆಸ್‌ನವರ ಬಳಿ ಸರಿಯಾದ ಯೋಜನೆಯಿಲ್ಲ. ಖುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ’ ಎಂದರು.