ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲಜೇರಿ: ಫೌಜಿಯಾ ತರನುಮ್ ನರೇಗಾ ಕಾಮಗಾರಿ ವೀಕ್ಷಣೆ

Last Updated 17 ಜುಲೈ 2021, 11:02 IST
ಅಕ್ಷರ ಗಾತ್ರ

ಕುಕನೂರು: ‘ಆರ್ಥಿಕವಾಗಿ ಹಿಂದುಳಿದವರು ಹಾಗೂ ದುರ್ಬಲ ವರ್ಗದವರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವ ಸಲುವಾಗಿ ಸರ್ಕಾರ ನರೇಗಾ ಯೋಜನೆ ಜಾರಿಗೆ ತಂದಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು‘ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನುಮ್ ಹೇಳಿದರು.

ತಾಲ್ಲೂಕಿನ ನೆಲಜೇರಿ ಗ್ರಾಮದಲ್ಲಿ ನರೇಗಾ ಕಾಮಗಾರಿಯನ್ನು ಪರಿಶೀಲಿಸಿ ನಂತರ ಅವರು ಮಾತನಾಡಿದರು.

ಉದ್ಯೋಗ ಖಾತ್ರಿ ಯೋಜನೆಯನ್ನು ಗ್ರಾಮೀಣ ಪ್ರದೇಶದ ಜನರಿಗಾಗಿಯೇ ಒತ್ತು ನೀಡಿ ಸರ್ಕಾರ ಜಾರಿಗೆ ತಂದಿದೆ. ಈ ಮೂಲಕ ನಮ್ಮ ಜಲ ಮೂಲಗಳಾದ ಕೆರೆ, ನಾಲಾ, ಹಳ್ಳ, ಭಾವಿ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ಕೆಲಸ ಕೊಡಬೇಕು. ಇದರಿಂದ ಜನರ ಕೈಗೆ ಹಣ ಸಿಗುತ್ತದೆ. ನಮ್ಮ ಜಲ ಮೂಲಗಳು ಪುನರುಜ್ಜೀವನ ಪಡೆಯುತ್ತವೆ. ಇದರಿಂದ ಅಂತರ್ಜಲ ಮಟ್ಟವೂ ಹೆಚ್ಚಳವಾಗುತ್ತದೆ ಎಂದರು.

ಪ್ರತಿಯೊಬ್ಬರೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದರು.

ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಅಕುಶಲ ಕಾರ್ಮಿಕರ ಜತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ನೆಲಜೇರಿ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾಲಾ ತಡೆಗೋಡೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಬಿರಾದಾರ್, ಪಂಚಾಯಿತಿ ಇಲಾಖೆಯ ತಾಲ್ಲೂಕು ಅಧಿಕಾರಿ ಮಹದೇವಪ್ಪ, ಸಹಾಯಕ ನಿರ್ದೇಶಕ ರಾಮಣ್ಣ ದೊಡ್ಡಮನಿ, ತಾಂತ್ರಿಕ ಸಂಯೋಜಕ ಯಮನೂರ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಪಿಡಿಒ ಅಬ್ದುಲ್ ಗಫಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT