ಸೋಮವಾರ, ಆಗಸ್ಟ್ 15, 2022
23 °C
ಸ್ವಚ್ಛ ಭಾರತ್ ಮಿಷನ್ ವಿಭಾಗದ ಜಿಲ್ಲಾ ಸಮಾಲೋಚಕಿ ಬಸಮ್ಮ ಅಭಿಮತ

ನಿರ್ಮಲ ಭಾರತ ಅಭಿಯಾನ ಅಭಿವೃದ್ಧಿಗೆ ಪೂರಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹನುಮಸಾಗರ: ‘ಗ್ರಾಮೀಣ ಪ್ರದೇಶದ ಪರಿಸರ, ಆರೋಗ್ಯ ಸುಧಾರಣೆ ಮತ್ತು ಆರ್ಥಿಕ ಸ್ವಾವಲಂಬನೆಗೆ ನಿರ್ಮಲ ಭಾರತ ಅಭಿಯಾನ ಪೂರಕವಾಗಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಕಾರ್ಯನಿರ್ವಹಿಸಲಿವೆ’ ಎಂದು ಸ್ವಚ್ಛ ಭಾರತ್ ಮಿಷನ್ ವಿಭಾಗದ ಜಿಲ್ಲಾ ಸಮಾಲೋಚಕಿ ಬಸಮ್ಮ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಸ್ವಚ್ಛ ಭಾರತ್ ಮಿಷನ್ ವಿಭಾಗದಿಂದ ನಡೆದ ತ್ಯಾಜ್ಯ ವಿಲೇವಾರಿ ತರಬೇತಿಯಲ್ಲಿ ಹೇಳಿದರು.

ತಾಲ್ಲೂಕು ನರೇಗಾ ಸಹಾಯಕ ನಿರ್ದೇಶಕ ವೆಂಕಟೇಲ ವಂದಾಲ ಮಾತನಾಡಿ,‘ಘನ, ದ್ರವ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ನಿರ್ಮಲ ಭಾರತ ಅಭಿಯಾನದ ಒಂದು ಪ್ರಮುಖ ಅಂಗವಾಗಿದೆ. ಗ್ರಾಮ ನೈರ್ಮಲ್ಯ ಕಾಪಾಡಿ ಗ್ರಾಮಾಂತರ ಪ್ರದೇಶದ ಜನರ ಜೀವನ ಮಟ್ಟ ಸುಧಾರಿಸುವುದು ಯೋಜನೆಯ ಮುಖ್ಯ ಉದ್ದೇಶ’ ಎಂದು ಹೇಳಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಮೂಲಿಮನಿ ಮಾತನಾಡಿ,‘ಮನೆಗಳಲ್ಲಿ ಸೃಷ್ಟಿಯಾಗುವ ಕಸ, ಪ್ಲಾಸ್ಟಿಕ್, ತರಕಾರಿ ತ್ಯಾಜ್ಯ, ಹಸಿ ಮತ್ತು ದ್ರವ ರೂಪದ ತ್ಯಾಜ್ಯಗಳನ್ನು ಒಂದೆಡೆ ಸಂಗ್ರಹಿಸಿ ಅದನ್ನು ಗೊಬ್ಬರವಾಗಿ ಪರಿವರ್ತಿಸುವ ಯೋಜನೆ ಇದಾಗಿದೆ’ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಾಯಕ ಪಟ್ಟಣಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಂಕ್ರಮ್ಮ ನಿರ್ವಾಣ, ಉಪಾಧ್ಯಕ್ಷೆ ಮಂಜುನಾಥ ಹುಲ್ಲೂರು ಹಾಗೂ ರಾಮಣ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.