ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅನುದಾನ ಬೇಡಿಕೆಗೆ ಸಿಗದ ಸ್ಪಂದನೆ: ಸೋಮಣ್ಣ ಹಳ್ಳಿ ಆರೋಪ

Published : 9 ಸೆಪ್ಟೆಂಬರ್ 2024, 15:14 IST
Last Updated : 9 ಸೆಪ್ಟೆಂಬರ್ 2024, 15:14 IST
ಫಾಲೋ ಮಾಡಿ
Comments

ಕೊಪ್ಪಳ: ಇಲ್ಲಿನ ನಗರಸಭೆ ವ್ಯಾಪ್ತಿಯ 16ನೇ ವಾರ್ಡ್‌ನಲ್ಲಿ ಅನೇಕ ಸಮಸ್ಯೆಗಳಿದ್ದು ಈ ಕುರಿತು ದೂರು ನೀಡದರೂ ಪ್ರಯೋಜನವಾಗಿಲ್ಲ. ವಾರ್ಡ್‌ ವ್ಯಾಪ್ತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸುವಂತೆ ಮಾಡಿದ ಮನವಿಗೂ ಸ್ಪಂದನೆ ಲಭಿಸಿಲ್ಲ ಎಂದು ನಗರಸಭೆಯ ಬಿಜೆಪಿ ಸದಸ್ಯ ಸೋಮಣ್ಣ ಹಳ್ಳಿ ಆರೋಪಿಸಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನನ್ನ ವಾರ್ಡ್‌ನಲ್ಲಿ ಉದ್ಯಾನ, ಸಮುದಾಯ ಭವನ ಹಾಗೂ ರಸ್ತೆ ಸೇರಿದಂತೆ ಹಲವು ಕೆಲಸಗಳನ್ನು ಮಾಡಲು ಅನುದಾನ ನೀಡುವಂತೆ ಅನೇಕ ಬಾರಿ ಮನವಿ ಮಾಡಲಾಗಿತ್ತು. ವಾರ್ಡ್‌ಗೆ ಅನುದಾನ ನೀಡದ ಪೌರಾಯುಕ್ತ ಹಾಗೂ ಸಹಾಯಕ ಎಂಜಿನಿಯರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಈ ಕುರಿತು ಸೋಮಣ್ಣ ಹಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಈಗ ಅದನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಕ್ರಮ ವಹಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್‌ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ಕಾರ್ಯಕರ್ತರಾದ ಚನ್ನಬಸಪ್ಪ ಗಾಳಿ ಹಾಗೂ ಮಾರುತಿ ನಾಯಕ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT