ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡ್ಡಾಯ ಧ್ವಜಾರೋಹಣಕ್ಕೆ ಸೂಚನೆ

Last Updated 6 ಜುಲೈ 2022, 16:17 IST
ಅಕ್ಷರ ಗಾತ್ರ

ಕೊಪ್ಪಳ: ‘ಸ್ವಾತಂತ್ತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಇದಕ್ಕೆ ಪೂರಕವಾಗಿ ನಮ್ಮ ಮನೆಗಳ ಮೇಲೆ ಧ್ವಜಾರೋಹಣ ಮಾಡುವುದು ನಮ್ಮೆಲ್ಲರ ಕರ್ತವ್ಯ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಅಭಿಯಾನ ಕಾರ್ಯಕ್ರಮ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ಕೇಂದ್ರದ ಮಾರ್ಗಸೂಚಿಯಂತೆ ಆ. 11 ರಿಂದ 17ರ ವರೆಗೆ ಎಲ್ಲ ಸರ್ಕಾರಿ ಕಚೇರಿಗಳು, ಮನೆಗಳು, ವ್ಯಾಪಾರಿ ಮಳಿಗೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಬೇಕು. ಸ್ವಾತಂತ್ರ್ಯ ಹೋರಾಟ, ತ್ಯಾಗ, ಬಲಿದಾನಗಳನ್ನು ಮಾಡಿದ ಎಲ್ಲರನ್ನು ಸ್ಮರಿಸಬೇಕು‘ ಎಂದರು.

’ಧ್ವಜಾರೋಹಣ ಮಾಡುವ ಬಗ್ಗೆ ಹಾಗೂ ಅದರ ನಿಯಮಗಳ ಬಗ್ಗೆ ಜಾಗೃತಿ ಜಾಥಾ, ಪ್ರಭಾತ್ ಪೇರಿ ಮೂಲಕ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು‘ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಸಮೀರ್ ಮುಲ್ಲಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಾಣೇಶ, ಜಂಟಿ ಕೈಗಾರಿಕಾ ನಿರ್ದೇಶಕ ಪ್ರಶಾಂತ್ ಬಾರಿಗಿಡದ, ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಭಾರತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT