ಕೊಪ್ಪಳ: ‘ತಾಲ್ಲೂಕು ವ್ಯಾಪ್ತಿಯಲ್ಲಿರುವ ರೆಸಾರ್ಟ್ಗಳು ಮತ್ತು ಹೋಂ ಸ್ಟೇಗಳು ಕಾನೂನುಬದ್ಧವಾಗಿ ನೋಂದಣಿ ಮಾಡಿಕೊಂಡಿಲ್ಲವಾದರೆ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ವಿಠ್ಠಲ ಚೌಗುಲಾ ಹೇಳಿದರು.

ಮಂಗಳವಾರ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು ‘ಅಕ್ರಮವಾಗಿ ನಿರ್ಮಿಸಿಕೊಂಡ ಹೋಂ ಸ್ಟೇ ಮತ್ತು ರೆಸಾರ್ಟ್ಗಳನ್ನು ತೆರವು ಮಾಡಲು ಜಿಲ್ಲಾಧಿಕಾರಿ ತಂಡ ರಚಿಸಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ ಅನೇಕವುಗಳಿಗೆ ಅನುಮತಿ ಇಲ್ಲ ಎನ್ನುವ ಮಾಹಿತಿಯಿದೆ. ಕಂದಾಯ, ಪಂಚಾಯತ್ ರಾಜ್ ಇಲಾಖೆ, ಪ್ರವಾಸೋದ್ಯಮ, ಅಬಕಾರಿ, ಪೊಲೀಸ್, ಅರಣ್ಯ ಮತ್ತು ಜೆಸ್ಕಾಂ ಅಧಿಕಾರಿಗಳು ಜಂಟಿಯಾಗಿ ಇವುಗಳ ವಿರುದ್ಧ ಕಾರ್ಯಾಚಣೆ ನಡೆಸಬೇಕು’ ಎಂದು ಸೂಚಿಸಿದರು.

‘ಮೊದಲು ರೆಸಾರ್ಟ್ಗಳು ಹಾಗೂ ಹೋಂ ಸ್ಟೇಗಳ ಮಾಲೀಕರ ವಿರುದ್ಧ ಸಭೆ ನಡೆಸಬೇಕು. ಸಾರ್ವಜನಿಕರ ಸುರಕ್ಷತೆ, ಪ್ರವಾಸಿಗರ ರಕ್ಷಣೆ, ಕಾನೂನು ಸುವ್ಯವಸ್ಥೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸ್ಥಳಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ತಂಡ ರಚಿಸಬೇಕು. ಸೂಕ್ತ ಪರವಾನಿಗೆ ಇಲ್ಲದೇ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಎಲ್ಲ ರೆಸಾರ್ಟ್ಗಳು ಮತ್ತು ಹೋಂ ಸ್ಟೇಗಳ ಮಾಲೀಕರಿಗೆ ನೋಟಿಸ್ ನೀಡಿ ಏಳು ದಿನಗಳ ಒಳಗೆ ದಾಖಲೆ ಒದಗಿಸುವಂತೆ ಸೂಚಿಸಬೇಕು. ದಾಖಲೆ ನೀಡದೇ ಹೋದರೆ ಸ್ವಯಂಪ್ರೇರಿತವಾಗಿ ತೆರವು ಮಾಡಬೇಕು. ಇಲ್ಲವಾದರೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್, ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸುರೇಶ ಡಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.