ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರರಾಷ್ಟ್ರೀಯ ಯೋಗ ದಿನದ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಅಂತರರರಾಷ್ಟ್ರೀಯ ಯೋಗ ದಿನ; ಪೂರ್ವಭಾವಿ ಸಭೆ
Last Updated 9 ಜೂನ್ 2022, 4:35 IST
ಅಕ್ಷರ ಗಾತ್ರ

ಕೊಪ್ಪಳ: ಅಂತರರಾಷ್ಟ್ರೀಯ ಯೋಗ ದಿನವಾದ ಜೂ. 21ರಂದು ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಕಾಸಕಿಶೋರ್ ಸುರಳ್ಕರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ‘ಈ ಬಾರಿ ಭಾರತ ಸರ್ಕಾರದ ಆಯುಷ್ ಮಂತ್ರಾಲಯವು ಯೋಗ ಫಾರ್ ಹುಮ್ಯಾನಿಟಿ’ ಎಂಬ ಆಶಯದಡಿ ಯೋಗದಿನ ಆಚರಿಸುತ್ತಿದೆ. ಜನ ಸಾಮಾನ್ಯರಲ್ಲಿ ಯೋಗದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು‘ ಎಂದರು.

ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಯಮನಪ್ಪ ಶಿರವಾರ ಮಾತನಾಡಿ ‘ಗವಿಸಿದ್ಧೇಶ್ವರ ಮಠದ ಆವರಣದಲ್ಲಿ, ಗಂಗಾವತಿ ತಾಲ್ಲೂಕಿನ ಆನೆಗೊಂದಿ, ಅಂಜನಾದ್ರಿ ಬೆಟ್ಟದ ಪ್ರದೇಶದಲ್ಲಿ ಮತ್ತು ಯಲಬುರ್ಗಾ ತಾಲ್ಲೂಕಿನ ಇಟಗಿ ಗ್ರಾಮದ ಮಹಾದೇವ ದೇವಾಲಯದ ಆವರಣದಲ್ಲಿ ಯೋಗ ದಿನ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ‘ ಎಂದು

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ‘ಯೋಗ ದಿನದಂದು ಭಾಗವಹಿಸುವ ಶಾಲಾ ಮಕ್ಕಳು, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರ ಸಹಭಾಗಿತ್ವ ಇರಬೇಕು‘ ಎಂದರು.

ವೈದ್ಯಾಧಿಕಾರಿಗಳಾದ ಗುರುರಾಜ್ ಉಮಚಗಿ, ರಾಜಶೇಖರ ನರನಾಳ, ವಿ.ಆರ್.ತಾಳಿಕೋಟೆ, ಶರಣಪ್ಪ ಡೈದ್ರಿ, ಪ್ರಹ್ಲಾದ್ ಐಲಿ, ದೇಶಪಾಂಡೆ,ಸೋಮಶೇಖರ ನಾಯಕ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT