ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಲಸಿಕೆ ಮಾಹಿತಿ ದಾಖಲಿಸಲು ಸೂಚನೆ

ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಾಗೃತಿ ಸಮಿತಿ ಸಭೆ
Last Updated 30 ಜೂನ್ 2022, 2:48 IST
ಅಕ್ಷರ ಗಾತ್ರ

ಕೊಪ್ಪಳ: ವಿವಿಧ ಹಂತಗಳಲ್ಲಿ ಕಾಲಕಾಲಕ್ಕೆ ಹಾಕುವ ಲಸಿಕೆಯಿಂದಾಗಿ ಮಗುವಿಗೆ ಆಗುವ ಪ್ರಯೋಜನಗಳ ಬಗ್ಗೆ ತಾಯಂದಿರಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಗು ಜನಿಸಿದ 24 ಗಂಟೆಯೊಳಗೆ ಹಾಕಬೇಕಾದ ಕಡ್ಡಾಯ ಲಸಿಕೆಗಳು ಹಾಗೂ ಮಗುವಿನ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಹಾಕಬೇಕಾದ ಲಸಿಕೆಗಳ ಬಗ್ಗೆ, ಲಸಿಕೆಯಿಂದ ಮಗುವಿಗೆ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಕೊಡಬೇಕು. ಲಸಿಕೆ ಹಾಕಿಸದಿದ್ದರೆ ಆಗುವ ಅನಾರೋಗ್ಯದ ಬಗ್ಗೆಯೂ ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕರ್ತೆಯರು, ಹೆರಿಗೆ ಮಾಡಿಸಿದ ವೈದ್ಯಾಧಿಕಾರಿಗಳು ತಾಯಂದಿರಿಗೆ ಸೂಕ್ತ ಸಮಯದಲ್ಲಿ ತಿಳಿವಳಿಕೆ ಮೂಡಿಸಬೇಕು’ ಎಂದರು.

‘2020-21ನೇ ಸಾಲಿನಲ್ಲಿ ಜನಿಸಿದ ಮಕ್ಕಳ ಸಂಖ್ಯೆ ಹಾಗೂ ನೀಡಿದ ಲಸಿಕೆಗಳ ಪ್ರಮಾಣಕ್ಕೆ ತಾಳೆಯಾಗುತ್ತಿಲ್ಲ. ಆದ್ದರಿಂದ ಇನ್ನುಮುಂದೆ ಲಸಿಕೆ ನೀಡಿದ ಕೂಡಲೇ ಆ ಮಾಹಿತಿ ನಮೂದಿಸುವ ಕುರಿತು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು. ಸಿಬ್ಬಂದಿಗೆ ಟ್ಯಾಬ್‌ ಕೊಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಕುರಿತು ಸಂಗ್ರಹಿಸಿದ ಮಾಹಿತಿಯನ್ನೂ ಪೋರ್ಟಲ್‌ನಲ್ಲಿ ದಾಖಲಿಸಬೇಕು‘ ಎಂದು ಸೂಚಿಸಿದರು.

’ನಿಗದಿತ ವಯೋಮಾನದಲ್ಲಿ ಲಸಿಕೆ ಪಡೆಯಲು ಅರ್ಹರಿರುವ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಶಾಲೆಯ ಮುಖ್ಯ ಶಿಕ್ಷಕರಿಗೆ ಡಿಡಿಪಿಐ ಅವರು ನಿರ್ದೇಶನ ನೀಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಅರ್ಹ ಎಲ್ಲ ಮಕ್ಕಳಿಗೂ ಲಸಿಕೆ ನೀಡುವಂತೆ ಕ್ರಮ ವಹಿಸಬೇಕು‘ ಎಂದರು.

ಹಿರಿಯ ವೈದ್ಯಾಧಿಕಾರಿ ಶ್ರೀಧರ ಮಾತನಾಡಿ ‘ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಪೋಲಿಯೊ, ದಡಾರ, ರುಬೆಲ್ಲಾ ಸೇರಿದಂತೆ ಒಟ್ಟು 12 ಲಸಿಕೆಗಳನ್ನು ಮಕ್ಕಳಿಗೆ ಹಾಕಲಾಗುತ್ತದೆ. ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಮಾರ್ಗಸೂಚಿಯನ್ವಯ ಅರ್ಹ ಎಲ್ಲ ಮಕ್ಕಳಿಗೂ ಲಸಿಕೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 28,000 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ‘ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT