ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ’ ಅನುಷ್ಠಾನದಲ್ಲಿ ಉದಾಸೀನ ಸಲ್ಲ: ಸೋಮಶೇಖರ ಬಿರಾದಾರ್

Last Updated 6 ಆಗಸ್ಟ್ 2021, 13:54 IST
ಅಕ್ಷರ ಗಾತ್ರ

ಕುಕನೂರು: ‘ನರೇಗಾ ಯೋಜನೆಯ ಅನುಷ್ಠಾನ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಉದಾಸೀನತೆ ತೋರಿಸಬಾರದು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ್ ಹೇಳಿದರು.

ತಾಲ್ಲೂಕಿನ ಮಂಡಲಗಿರಿ ಗ್ರಾಮದಲ್ಲಿ ಬುಧವಾರ ನಡೆದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ. ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣ, ಶಾಲಾ ಆವರಣದಲ್ಲಿ ಮಕ್ಕಳ ಆಟದ ಮೈದಾನ ಅಭಿವೃದ್ಧಿ, ಅಗತ್ಯವಿದ್ದಲ್ಲಿ ಕೈತೋಟ ನಿರ್ಮಾಣ ಸೇರಿದಂತೆ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ. ಸಮುದಾಯ ಕಾಮಗಾರಿಯಡಿಯಲ್ಲಿ ಶಾಲೆ, ಸ್ಮಶಾನ, ಕೆರೆಗಳ ಅಭಿವೃದ್ಧಿ ಸೇರಿದಂತೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದರು.

ಸಮುದಾಯದ ಕಾಮಗಾರಿಗಳಂತೆ ಕೊಟ್ಟಿಗೆ ನಿರ್ಮಾಣ, ಕೃಷಿ ಮತ್ತು ತೋಟಗಾರಿಕಾ ಬೆಳಗಳಿಗೆ ಉತ್ತೇಜನ ನೀಡುವ ವೈಯಕ್ತಿಕ ಕಾಮಗಾರಿಗಳಿಗೂ ಅವಕಾಶ ಮಾಡಿಕೊಡಿ. ಈ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಿ, ಮಾನವ ದಿನಗಳನ್ನು ಹೆಚ್ಚುಮಾಡಿ, ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನತೆಗೆ ನರೇಗಾ ಮೂಲಕ ಹಚ್ಚಿನ ಅನುಕೂಲವಾಗುವಂತೆ ನೋಡಿಕೊಳ್ಳಿ ಎಂದು ಅವರು ತಿಳಿಸಿದರು.

ತಾಲ್ಲೂಕಿನ 52 ಗ್ರಾಮಗಳಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಜಲಜೀವ ಮಿಷನ್ ಕಾಮಗಾರಿ ಈಗಾಗಲೇ ಆರಂಭ ಗೊಂಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಜನಜೀವನ ಮಿಷನ್ ಕಾಮಗಾರಿಯನ್ನು ಬೇಗನೆ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಿಡಿಒ ಪರಶುರಾಮ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT