ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಭಿವೃದ್ಧಿಗೆ ನರೇಗಾ ಸಹಕಾರಿ’

Last Updated 9 ಜೂನ್ 2021, 5:00 IST
ಅಕ್ಷರ ಗಾತ್ರ

ಮಂಡಲಗಿರಿ (ಕುಕನೂರು): ‘ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಗ್ರಾಮಗಳನ್ನು ಅಭಿವೃದ್ಧಿಗೊಳಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಬಿರಾದಾರ್ ಹೇಳಿದರು.

ತಾಲ್ಲೂಕಿನ ಮಂಡಲಗಿರಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಲಾಕ್‌ಡೌನ್‌ ಬಳಿಕ ನರೇಗಾ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

‘ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಇದು ಕಾರ್ಮಿಕ ವರ್ಗದವರು ಆರ್ಥಿಕವಾಗಿ ಸಬಲರಾಗಲು ಸಹಾಯಕ ಆಗಿದೆ. ಆದ್ದರಿಂದ ಮಂಡಲಗಿರಿಯಲ್ಲಿಯೂ ಹೊಸ ಹೊಸ ಯೋಜನೆಗಳಲ್ಲಿ ಕೆಲಸ ಕೈಗೊಳ್ಳಬೇಕು’ ಎಂದರು. ದುಡಿಯೋಣ ಬಾ ಅಭಿಯಾನದಡಿ ರೈತರ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ತೆರೆದಬಾವಿ ಹಾಗೂ ಸಮಗ್ರ ಕೆರೆ ಅಭಿವೃದ್ಧಿ ಕೈಗೊಳ್ಳಬಹುದು. ಶಾಲೆಗಳ ಆವರಣಗಳಲ್ಲಿ ಆಟದ ಮೈದಾನ ಅಭಿವೃದ್ಧಿಪಡಿಸಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT