ಗಂಗಾವತಿ: ಅಕ್ರಮ ಮರಳು ಅಡ್ಡೆ ಮೇಲೆ ದಾಳಿ

ಗಂಗಾವತಿ: ತಾಲ್ಲೂಕಿನ ಹೆಬ್ಬಾಳ ಗ್ರಾಮದ ಬಳಿಯ ಅಕ್ರಮ ಮರಳು ಅಡ್ಡೆ ಮೇಲೆ ಭಾನುವಾರ ತಡರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 100 ಮೆಟ್ರಿಕ್ ಟನ್ ಮರಳು ಹಾಗೂ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದಾರೆ.
ಅಧಿಕಾರಿಗಳು ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ರೂಪಾ, ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ದೊಡ್ಡಪ್ಪ ಜೆ, ಕಂದಾಯ ನಿರೀಕ್ಷಕ ಹನುಮಂತಪ್ಪ ಹಾಗೂ ಗ್ರಾಮ ಲೆಕ್ಕಾಧಿಕಾರಿ ರಾಜು ಭಜಂತ್ರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.