ಮಂಗಳವಾರ, ಜೂನ್ 22, 2021
22 °C
ಸಭೆಯಲ್ಲಿ ತಹಶೀಲ್ದಾರ್ ಶ್ರೀಶೈಲ ತಳವಾರ ಸೂಚನೆ

ಸೋಂಕು ಪತ್ತೆಹಚ್ಚಿ ಚಿಕಿತ್ಸೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ಗಾ: ‘ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಸೋಂಕಿತರನ್ನು ಪತ್ತೆ ಮಾಡಿ ಚಿಕಿತ್ಸೆಗೆ ಒಳಪಡಿಸಬೇಕಾಗಿದೆ’ ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ ಹೇಳಿದರು.

ಪಟ್ಟಣ ಪಂಚಾಯಿತಿ ಅವರಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ನಿರ್ಲಕ್ಷ್ಯ ತೋರುವಂತಿಲ್ಲ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿಯೂ ಹರಡುವಿಕೆ ಪ್ರಮಾಣ ಹೆಚ್ಚುತ್ತಿದೆ’ ಎಂದು ಅವರು ಹೇಳಿದರು.

ಪಟ್ಟಣದ ವಿವಿಧ ವಾರ್ಡ್‍ಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ನಿಯೋಜನೆಗೊಂಡ ಸಿಬ್ಬಂದಿ ಸೋಂಕಿತರನ್ನು ಪತ್ತೆಮಾಡಿ ಅವರಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕು. ಆಯಾ ವಾರ್ಡ್‌ಗಳ ಜನಪ್ರತಿನಿಧಿಗಳು ಕೂಡಾ ಆಸಕ್ತಿ ತೋರಬೇಕು. ಕೋವಿಡ್ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದು ಹೇಳಿದರು.

ಸಿಪಿಐ ಎಂ.ನಾಗರೆಡ್ಡಿ ಮಾತನಾಡಿ,‘ರಾಜ್ಯದಲ್ಲಿ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿದೆ. ಇದರ ನಿವಾರಣೆಗಾಗಿ ಸರ್ಕಾರ ಲಾಕ್‍ಡೌನ್ ಘೊಷಿಸಿದೆ. ಈ ಸಂದರ್ಭದಲ್ಲಿ ಅನಗತ್ಯವಾಗಿ ತಿರುಗಾಡುವುದು, ಮಾಸ್ಕ್ ಧರಿಸದೇ ಇರುವುದು ಹಾಗೂ ಅಂತರ ಕಾಯ್ದುಕೊಳ್ಳದೇ ಗುಂಪು ಗುಂಪಾಗಿ ಸೇರುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ’ ಎಂದರು.

ಪ.ಪಂ. ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಮಾತನಾಡಿ,‘ಕೋವಿಡ್ ನಿವಾರಣೆಗೆ ಪಂಚಾಯಿತಿ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಎಲ್ಲ ವಾರ್ಡ್‌ಗಳಲ್ಲಿ ಸ್ಯಾನಿಟೈಸರ್‌ ಸಿಂಪಡಿಸುವ ಕೆಲಸ ಪ್ರಗತಿಯಲ್ಲಿದೆ. ಸಾರ್ವನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ’ ಎಂದು ಅಭಿಪ್ರಾಯಪಟ್ಟರು.

ಪಟ್ಟಣ ಪಂಚಾಯಿತಿಯ ಸ್ಥಾಯಿ ಸಮಿತಿ ಅಧ್ಯಕ್ಷ ವಸಂತಕುಮಾರ ಭಾವಿಮನಿ, ಮೇಲ್ವಿಚಾರಕಿ ಲಲಿತಾ ನಾಯಕ ಮತ್ತಿತರರು
ಮಾತನಾಡಿದರು.

ಸಭೆಯಲ್ಲಿ ವರ್ತಕರ ಸಂಘದ ಅಧ್ಯಕ್ಷ ಶಿವಕುಮಾರ ಭೂತೆ, ಪ.ಪಂ. ಸಿಬ್ಬಂದಿ ವೆಂಕಣ್ಣ ಜೋಶಿ, ಶಿವಕುಮಾರ ಸರಗಣಚಾರ, ಎಚ್.ರಾಮಣ್ಣ, ರಮೇಶ ಬೇಲೇರಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.