ಮಂಗಳವಾರ, ಸೆಪ್ಟೆಂಬರ್ 28, 2021
26 °C

ಕಾರಟಗಿ: ಕಾರು ಡಿಕ್ಕಿ ವೃದ್ಧ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರಟಗಿ: ಜಮೀನಿಗೆ ತೆರಳುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ವೃದ್ಧರೊಬ್ಬರು ಮೃತಪಟ್ಟ ಘಟನೆ ಪಟ್ಟಣದಲ್ಲಿ ಜರುಗಿದೆ.

ಪಟ್ಟಣದ ನಿವಾಸಿ ಮರಿಯಪ್ಪ ಹಿರೇಮನಿ (60) ಮೃತಪಟ್ಟವರು. ಇವರು ಆ. 12ರಂದು ಜಮೀನಿಗೆ ತೆರಳುವಾಗ ಲಕ್ಷ್ಮೀ ವೇ ಬ್ರಿಡ್ಜ್‌ ಬಳಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಚಾಲಕ ಕಾರು ಸಹಿತ ಪರಾರಿಯಾಗಿದ್ದಾನೆ.

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಅವರಿಗೆ ಕಾರಟಗಿ ಹಾಗೂ ಗಂಗಾವತಿಯಲ್ಲಿ ಚಿಕಿತ್ಸೆ ಕೊಡಿಸಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ (ಆ.17) ಮೃತಪಟ್ಟರು ಎಂದು ಅವರ ಪುತ್ರ ತಿಮ್ಮಣ್ಣ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.