ಗುರುವಾರ , ಡಿಸೆಂಬರ್ 3, 2020
20 °C

ಕೊಪ್ಪಳ: ಅಡುಗೆ ಭಟ್ಟನನ್ನು ಹೊತ್ತೊಯ್ದ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಆನೆಗೊಂದಿ ಸಮೀಪದ ಆದಿಶಕ್ತಿ ದುರ್ಗಾದೇವಿ ದೇಗುಲದ ಅಡುಗೆಭಟ್ಟನನ್ನು ಚಿರತೆ ಹೊತ್ತೊಯ್ದ ಘಟನೆ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ.

ಹುಲುಗೇಶ (24) ಚಿರತೆ ದಾಳಿಗೆ ಬಲಿಯಾದ ಆಡುಗೆ ಭಟ್ಟ

ಕಳೆದ ಆರೇಳು ವರ್ಷಗಳಿಂದ ದೇಗುಲದಲ್ಲಿ ಆಡುಗೆ ಮಾಡಿಕೊಂಡಿದ್ದ ಹುಲಗೇಶ ಬರ್ಹಿದೆಸೆಗೆ ಹೋದಾಗ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ.

ಆನೆಗೊಂದಿಯ ಮ್ಯಾಗೋಟದ ಬಳಿ ದೇಹದ ಭಾಗಗಳು ಪತ್ತೆಯಾಗಿದ್ದು,  ಅರಣ್ಯ ಅಧಿಕಾರಿಗಳು, ತಹಶೀಲ್ದಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ ಈ ಭಾಗದಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿದು ವಾಜಪೇಯ ಜೈವಿಕ ಉದ್ಯಾನಕ್ಕೆ ಸ್ಥಳಾಂತರಿಸಲಾಗಿತ್ತು.

ಈಗ ಅಡುಗೆ ಭಟ್ ನನ್ನು ಹೊತ್ತುಕೊಂಡು ಹೋಗಿ ಸಾಯಿಸಿರುವ ಘಟನೆ ತೀವ್ರ ಆತಂಕ ಮೂಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು